ಗುರುವಾರ , ಏಪ್ರಿಲ್ 22, 2021
30 °C

ರಮೇಶ ಜಾರಕಿಹೊಳಿ ಆರೋಗ್ಯ ಮಾಹಿತಿ ಪಡೆದ ಎಸ್‌ಐಟಿ ಅಧಿಕಾರಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗೋಕಾಕ (ಬೆಳಗಾವಿ ಜಿಲ್ಲೆ): ಸಿ.ಡಿ. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿಯ ಇಬ್ಬರು ಅಧಿಕಾರಿಗಳು ಇಲ್ಲಿನ ತಾಲ್ಲೂಕು ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ, ಕೋವಿಡ್–19ನಿಂದಾಗಿ ದಾಖಲಾಗಿರುವ ಶಾಸಕ ರಮೇಶ ಜಾರಕಿಹೊಳಿ ಅವರ ಆರೋಗ್ಯ ಸ್ಥಿತಿ ಕುರಿತು ವೈದ್ಯರಿಂದ ಮಾಹಿತಿ ಪಡೆದರು.

ಅವರ ಆರೋಗ್ಯ ವರದಿ ಪರಿಶೀಲಿಸಿದರು. ಆಸ್ಪತ್ರೆಯಿಂದ ಬಿಡುಗಡೆಗೂ ಮುನ್ನವೇ ಮಾಹಿತಿ ನೀಡಬೇಕು ಎಂದು ವೈದ್ಯಾಧಿಕಾರಿಗೆ ಸೂಚಿಸಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ, ‘ಎಸ್‌ಐಟಿ ಅಧಿಕಾರಿಗಳು ರಮೇಶ ಅವರ ಆರೋಗ್ಯ ಸ್ಥಿತಿಯ ಮಾಹಿತಿ ಪಡೆದರು. ಅವರನ್ನು ಬಿಡುಗಡೆ ಮಾಡುವ ಪೂರ್ವದಲ್ಲಿ ತಿಳಿಸುವಂತೆ ಸೂಚಿಸಿದ್ದಾರೆ.

ಸೋಂಕಿತರಿಗೆ ಕೊಡುತ್ತಿರುವ ಚಿಕಿತ್ಸೆಯ ಸಂಪೂರ್ಣ ಮಾಹಿತಿಯನ್ನೂ ನೀಡಿದ್ದೇವೆ. ರೋಗಿಯನ್ನು ಅವರು ಭೇಟಿಯಾಗಿಲ್ಲ. ನಮ್ಮೊಂದಿಗೆ ಒಂದು ಗಂಟೆ ಚರ್ಚಿಸಿದರು’ ಎಂದು ತಿಳಿಸಿದರು.

‘ರೋಗಿ ಗುಣಮುಖರಾಗದೆ ಬಿಡುಗಡೆ ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಪ್ರತಿಕ್ರಿಯಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು