ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರಕ್ಕೆ ಕಾರು ಡಿಕ್ಕಿ: ಆರು ಮಂದಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Published 22 ಫೆಬ್ರುವರಿ 2024, 12:31 IST
Last Updated 22 ಫೆಬ್ರುವರಿ 2024, 12:31 IST
ಅಕ್ಷರ ಗಾತ್ರ

ಖಾನಾಪುರ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ನಂದಗಢ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗೇನಕೊಪ್ಪದ ಹದ್ದಿನಲ್ಲಿ ಗುರುವಾರ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದಿದ್ದು ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇನ್ನೂ ನಾಲ್ವರಿಗೆ ತೀವ್ರ ಗಾಯಗಳಾಗಿವೆ. ಧಾರವಾಡ ಹಾಗೂ ಹಾವೇರಿಯ ಎರಡು ಕುಟುಂಬದವರು ಈ ಕಾರಿನಲ್ಲಿದ್ದರು.

ಕಾರು ಚಾಲಕ ಮಹಾರಾಷ್ಟ್ರದ ಶಹಾಪುರದ ನಿವಾಸಿ ಶಾರೂಖ್‌ ಪೆಂಡಾರಿ (30), ರಾಯಬಾಗ ತಾಲ್ಲೂಕು ಹಾರೂಗೇರಿ ನಿವಾಸಿ ಇಕ್ಬಾಲ್ ಜಮಾದಾರ (42), ಇವರ ಪುತ್ರ ಫರಾನ್ (12), ಧಾರವಾಡ ನಗರದ ನಿವಾಸಿಗಳಾದ ಸಾನಿಯಾ ಲಂಗೋಟಿ (25), ಉಮ್ರಬೇಗಮ್ ಲಂಗೋಟಿ (20), ಶಬಾನಾ ಲಂಗೋಟಿ (33) ಮೃತಪಟ್ಟವರು.

ಚನ್ನಮ್ಮನ ಕಿತ್ತೂರಿನ ಫರಾಜ್‌ ಅಕ್ಖರ್ ಬೆಟಗೇರಿ, ಧಾರವಾಡದ ಸೋಫಿಯಾ ವಸೀಮ್ ಲಂಗೋಟಿ, ಹಾರೂಗೇರಿಯ ಸಾನಿಯಾ ಇಕ್ಬಾಲ್ ಜಮಾದಾರ ಮತ್ತು ಸೋಫಿಯಾ ಮಾಹಿನ್ ಜಮಾದಾರ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಖಾನಾಪುರ ತಾಲ್ಲೂಕಿನ ಗೋಲ್ಯಾಳ ಗ್ರಾಮದಲ್ಲಿ ಗುರುವಾರ ಸಂಬಂಧಿಕರ ಮದುವೆ ಇತ್ತು. ಆ ಮದುವೆಯ ಕೆಲ ಸಾಮಗ್ರಿಗಳು ಇವರ ಕಾರಿನಲ್ಲಿದ್ದವು. ಮದುವೆ ಕಾರ್ಯಕ್ಕೆ ತಡವಾದ ಕಾರಣ ಬೇಗ ಬರುವಂತೆ ಸಂಬಂಧಿಕರು ಫೋನ್‌ ಮಾಡುತ್ತಿದ್ದರು. ಇದರಿಂದ ಕಾರ್‌ ಚಾಲಕ ವೇಗವಾಗಿ ಓಡಿಸುತ್ತಿದ್ದ.

ಚನ್ನಮ್ಮನ ಕಿತ್ತೂರು ಕಡೆಯಿಂದ ಬೀಡಿ ಗ್ರಾಮದ ಕಡೆಗೆ ಹೊರಟಿದ್ದ ಕಾರಿನಲ್ಲಿ ಮೂವರು ಮಕ್ಕಳೂ ಸೇರಿದಂತೆ 10 ಮಂದಿ ಪ್ರಯಾಣಿಸುತ್ತಿದ್ದರು. ಕಾರು ಮಂಗೇನಕೊಪ್ಪ ಗ್ರಾಮದ ಬಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆಯಿತು ಎಂದು ಮೂಲಗಳು ತಿಳಿಸಿವೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಹಾಗೂ ಪೊಲೀಸ್‌ ತಂಡ ಸ್ಥಳಕ್ಕೆ ದೌಡಾಯಿಸಿದೆ. ಗಾಯಗೊಂಡವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅವರೆಲ್ಲರ ಸ್ಥಿತಿಯೂ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT