ಶನಿವಾರ, ನವೆಂಬರ್ 28, 2020
18 °C

ಬೆಳಗಾವಿ: ಮೂರು ಕಾಲೇಜುಗಳ ಆರು ಸಿಬ್ಬಂದಿಗೆ ಕೋವಿಡ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಇಲ್ಲಿನ ಮೂರು ಕಾಲೇಜುಗಳ ಆರು ಸಿಬ್ಬಂದಿಗೆ ಶುಕ್ರವಾರ ಕೋವಿಡ್–19 ದೃಢಪಟ್ಟಿದೆ.

ಪದವಿ ಕಾಲೇಜುಗಳು ಪುನರಾರಂಭಕ್ಕೆ ಅವಕಾಶ ನೀಡಲಾಗಿದ್ದು, ಸರ್ಕಾರದ ಮಾರ್ಗಸೂಚಿ ಪ್ರಕಾರ ಆರೋಗ್ಯ ಇಲಾಖೆಯ ಸಿಬ್ಬಂದಿಯು ಆಯಾ ಕಾಲೇಜುಗಳಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸುತ್ತಿದ್ದಾರೆ. ಗಂಟಲು ಅಥವಾ ಮೂಗಿನ ದ್ರವದ ಮಾದರಿ ಸಂಗ್ರಹಿಸುತ್ತಿದ್ದಾರೆ. ಈ ಪೈಕಿ, ಹಲವರ ವರದಿಗಳು ಶುಕ್ರವಾರ ಬಂದಿದೆ. ಇವರಲ್ಲಿ ಆರು ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ.

ಪಾಲಿಟೆಕ್ನಿಕ್ ಹಾಗೂ ಎಂಜಿನಿಯರಿಂಗ್ ಕಾಲೇಜುಗಳಲ್ಲೂ ಕೋವಿಡ್ ಪರೀಕ್ಷೆ ಪ್ರಕ್ರಿಯೆ ನಡೆಸಲಾಗುತ್ತಿದೆ.

‘ನಗರದ ವಿವಿಧ ಕಾಲೇಜುಗಳ 2,027 ಸಿಬ್ಬಂದಿಯ ಮಾದರಿ ಸಂಗ್ರಹಿಸಲಾಗಿತ್ತು. ಶುಕ್ರವಾರ 250 ಮಂದಿಯ ವರದಿ ಬಂದಿದ್ದು, ಇವರಲ್ಲಿ ಆರು ಮಂದಿಗೆ ಕೋವಿಡ್ ಇರುವುದು ದೃಢವಾಗಿದೆ. ಕಾಲೇಜುಗಳಲ್ಲಿ ತರಗತಿಗೆ ಹಾಜರಾಗಲು ಬಯಸುವ ವಿದ್ಯಾರ್ಥಿಗಳಿಗೆ ಶನಿವಾರ (ನ.21)ದಿಂದ ಅವರವರ ಕಾಲೇಜುಗಳಲ್ಲೇ ಕೋವಿಡ್ ಪರೀಕ್ಷೆ ನಡೆಸಲಾಗುವುದು’ ಎಂದು ಮೂಲಗಳು ಮಾಹಿತಿ ನೀಡಿವೆ.

ವಿದ್ಯಾರ್ಥಿಗಳು ಗಂಟಲು ಮಾದರಿ ನೀಡುವುದಕ್ಕಾಗಿ ಬಿಮ್ಸ್‌ ಆಸ್ಪತ್ರೆಗೆ ಬರುವುದು ಸಾಮಾನ್ಯವಾಗಿದೆ.

‘ಆನ್‌ಲೈನ್‌ನಲ್ಲಿ ತರಗತಿಗೆ ಹಾಜರಾಗಲು ಬಯಸುವ ವಿದ್ಯಾರ್ಥಿಗಳು ಪರೀಕ್ಷೆ ಮಾಡಿಸಿಕೊಳ್ಳುವ ಅಗತ್ಯವಿಲ್ಲ. ಪರೀಕ್ಷೆಗೆ ಒಳಗಾದವರಲ್ಲಿ ಕೆಲವರಿಗೆ ಮಾತ್ರವೇ ಕೋವಿಡ್ ದೃಢಪಟ್ಟಿದೆ. ಹೀಗಾಗಿ, ಆತಂಕಪಡುವ ಅಗತ್ಯವಿಲ್ಲ’ ಎಂದು ಡಿಎಚ್‌ಒ ಡಾ.ಎಸ್.ವಿ. ಮುನ್ಯಾಳ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು