ಬೆಳಗಾವಿ: ‘ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಗರದಲ್ಲಿ ಕೈಗೆತ್ತಿಕೊಳ್ಳಲಾಗಿರುವ ರಸ್ತೆ ನಿರ್ಮಾಣ ಸೇರಿದಂತೆ ಎಲ್ಲ ಪ್ರಮುಖ ಕಾಮಗಾರಿಗಳನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ. ಅತೀಕ್ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ಬುಧವಾರ ನಡೆದ ಸ್ಮಾರ್ಟ್ ಸಿಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಕಾಮಗಾರಿಗಳು ನಿಧಾನಗತಿಯಲ್ಲಿ ನಡೆಯುತ್ತಿರುವ ಬಗ್ಗೆ ದೂರುಗಳು ಬರುತ್ತಿರುವೆ. ಆದ್ದರಿಂದ ಚುರುಕುಗೊಳಿಸಬೇಕು. ಮಳೆಗಾಲಕ್ಕಿಂತ ಮುಂಚೆಯೇ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಕಲ್ಪಿಸಿದರೆ ಅನುಕೂಲವಾಗುತ್ತದೆ. ಆದ್ದರಿಂದ ರಸ್ತೆ, ವಿದ್ಯುದ್ದೀಕರಣ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು’ ಎಮದು ಸೂಚಿಸಿದರು.

ಬೆಳೆಯುತ್ತಿರುವ ಬೆಳಗಾವಿ ನಗರದಲ್ಲಿ ಮುಂಬರುವ ದಿನಗಳಲ್ಲಿ ಘನತ್ಯಾಜ್ಯವನ್ನು ವೈಜ್ಞಾನಿಕ ವಿಧಾನದಲ್ಲಿ ಬಳಕೆ ಮಾಡಿಕೊಳ್ಳುವ ಕುರಿತು ಚರ್ಚಿಸಿದರು. ಆರಂಭಿಕ ಹಂತದಲ್ಲಿಯೇ ಕೀಟಗಳ ಲಾರ್ವಾ ಬಳಕೆ ಮಾಡಿಕೊಳ್ಳುವ ತಂತ್ರಜ್ಞಾನ ಅಳವಡಿಸಿಕೊಳ್ಳುವ ತಿಳಿಸಿದರು. ಈ ತಂತ್ರಜ್ಞಾನ ಅಳವಡಿಸಿಕೊಂಡರೆ ಹೋಟೆಲ್ ತ್ಯಾಜ್ಯ, ತರಕಾರಿ ಮತ್ತು ಮಾಂಸದ ತ್ಯಾಜ್ಯವನ್ನು ಕೂಡ ಸಮರ್ಪಕವಾಗಿ ನಿರ್ಹಹಿಸಬಹುದು ಎಂದು ಹೇಳಿದರು.

ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ ಕಾಮಗಾರಿಗಳ ಮಾಹಿತಿ ನೀಡಿದರು. ಜಿಲ್ಲಾ ಪಂಚಾಯ್ತಿ ಸಿಇಒ ಎಚ್.ವಿ. ದರ್ಶನ್, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.