ಮಂಗಳವಾರ, ಜನವರಿ 19, 2021
27 °C

‘ಹಿಂದುತ್ವದ ಸ್ನೇಹ ಭೋಜನ’ ಕಾರ್ಯಕ್ರಮ ನಾಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಹಿಂದುತ್ವದ ಏಕತೆಗಾಗಿ ಹಿಂದೂ ಕಾರ್ಯಕರ್ತರ 24ನೇ ವರ್ಷದ ಸ್ನೇಹ ಭೋಜನ‌ ಕಾರ್ಯಕ್ರಮವನ್ನು ತಾಲ್ಲೂಕಿನ ನಾವಗೆಯ ಗಣೇಶ ಬಾಗ್ ತೋಟದ ಆವರಣದಲ್ಲಿ ಜ. 10ರಂದು ಬೆಳಗ್ಗೆ 11ಕ್ಕೆ ಆಯೋಜಿಸಲಾಗಿದೆ.

ಮುಖಂಡ ಧನಂಜಯ ಜಾಧವ ಮಿತ್ರ ಪರಿವಾರದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರ ಹಾಗೂ ನಗರದ ಸಾವಿರಾರು  ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ಶಾಸಕರಾದ ಮಹಾಂತೇಶ ದೊಡ್ಡಗೌಡರ, ಮಹಾದೇವಪ್ಪ ಯಾದವಾಡ, ಅನಿಲ ಬೆನಕೆ, ಅಭಯ ಪಾಟೀಲ,  ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ಮುಖಂಡರಾದ ನಿರ್ಮಲಕುಮಾರ ಸುರಾನಾ, ಮಹೇಶ ಟೆಂಗಿನಕಾಯಿ, ವಿಶ್ವನಾಥ ಪಾಟೀಲ, ಜಗದೀಶ ಮೆಟಗುಡ್ಡ, ಸಂಜಯ ಕುಬಲ್, ಮನೋಹರ ಕಡೋಲ್ಕರ್‌ ಪಾಲ್ಗೊಳ್ಳಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು