ಬುಧವಾರ, ಜನವರಿ 20, 2021
26 °C

‘ನೂತನ ಶಿಕ್ಷಣ ನೀತಿಯಿಂದ ಅನುಕೂಲ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ನೂತನ ಶಿಕ್ಷಣ ನೀತಿಯು ಬಹುಶಿಸ್ತೀಯ ಪಠ್ಯಕ್ರಮವನ್ನು ಒಳಗೊಂಡಿದ್ದು, ವಿದ್ಯಾರ್ಥಿಗಳು ಪ್ರಸ್ತುತ ಕಾಲಕ್ಕೆ ತಕ್ಕಂತೆ ವೈಜ್ಞಾನಿಕ ಮತ್ತು ತಾಂತ್ರಿಕ ಜ್ಞಾನಾರ್ಜನೆ ಪಡೆಯುವ ಸದಾವಕಾಶ ಕಲ್ಪಿಸಿದೆ’ ಎಂದು ವಿಧಾನಪರಿಷತ್ ಸದಸ್ಯ ಅರುಣ ಶಹಾಪೂರ ಹೇಳಿದರು.

ನಗರದ ರಾಜಾ ಲಖಮಗೌಡ ಪದವಿ ಪೂರ್ವ ವಿಜ್ಞಾನ ಕಾಲೇಜು ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಶುಕ್ರವಾರ ನಡೆದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ- ಚರ್ಚಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ನೂತನ ಶಿಕ್ಷಣ ನೀತಿಯು ವಿದ್ಯಾರ್ಥಿಗಳು ಶಿಕ್ಷಕರು ಹಾಗೂ ಸಮಾಜಕ್ಕೆ ಬಹಳ ಉಪಯುಕ್ತವಾಗಿದೆ’ ಎಂದರು.

ಡಿಡಿಪಿಯು ರಾಜಶೇಖರ ಪಟ್ಟಣಶೆಟ್ಟಿ ಮಾತನಾಡಿದರು. ಮರಾಠಾ ಮಂಡಳ ಪಿಯು ಕಾಲೇಜಿನ ಪ್ರಾಚಾರ್ಯ ಡಾ.ಐ.ಸಿ. ಸಾವಂತ ನೌಕರರ ಕುಂದುಕೊರತೆಗಳ ಬಗ್ಗೆ ಗಮನಸೆಳೆದರು.

ಅಪೂರ್ವಾ ಕರಿಕಟ್ಟಿ ಸ್ವಾಗತ ಗೀತೆ ಹಾಡಿದರು. ಕಾಲೇಜಿನ ಪ್ರಾಚಾರ್ಯಎಸ್.ಜಿ. ನಂಜಪ್ಪನವರ ಸ್ವಾಗತಿಸಿದರು. ಎಸ್.ಬಿ. ಬನ್ನಿಮಟ್ಟಿ ನಿರೂಪಿಸಿದರು. ಇಟಗಿ ಪಿಯು ಕಾಲೇಜಿನ ಪ್ರಾಚಾರ್ಯ ಜಿ.ಬಿ. ನಾಯ್ಕರ ವಂದಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.