ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರೀಡಾಶಾಲೆ ಅವ್ಯವಸ್ಥೆ; ಸ್ವಯಂಪ್ರೇರಿತ ದೂರು ದಾಖಲು

Published 13 ಫೆಬ್ರುವರಿ 2024, 5:08 IST
Last Updated 13 ಫೆಬ್ರುವರಿ 2024, 5:08 IST
ಅಕ್ಷರ ಗಾತ್ರ

ಬೆಳಗಾವಿ: ರಾಜ್ಯದ ಕ್ರೀಡಾಶಾಲೆಗಳು, ಕ್ರೀಡಾ ಹಾಸ್ಟೆಲ್‌ ಮತ್ತು ಜಿಲ್ಲಾ ಕ್ರೀಡಾಂಗಣಗಳ ಸ್ಥಿತಿಗತಿ ಕುರಿತು ಪ್ರಜಾವಾಣಿ ಫೆಬ್ರುವರಿ 11ರ ಸಂಚಿಕೆಯ ಒಳನೋಟ ಅಂಕಣದಲ್ಲಿ ಪ್ರಕಟವಾದ ‘ನೆರವಿಗೆ ಕಾಯುತ್ತಿದೆ ಆಟ’ ವಿಶೇಷ ವರದಿಯ ಅಂಶಗಳನ್ನು ಆಧರಿಸಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಸೋಮವಾರ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.

‘ಕ್ರೀಡಾ ಹಾಸ್ಟೆಲ್‌ ಮತ್ತು ಕ್ರೀಡಾಂಗಣಗಳಲ್ಲಿ ಕ್ರೀಡಾಪಟುಗಳಿಗೆ ತರಬೇತಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು. ಕ್ರೀಡಾ ಸೌಲಭ್ಯ ಅಭಿವೃದ್ಧಿ ದೃಷ್ಟಿಯಿಂದ ಕೈಗೊಂಡ ಕ್ರಮಗಳ ವರದಿಯನ್ನು ಒಂದು ವಾರದೊಳಗೆ ಆಯೋಗಕ್ಕೆ ಸಲ್ಲಿಸಬೇಕು’ ಎಂದು ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಅವರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

‘ನಾನು ವಿವಿಧ ಜಿಲ್ಲೆಗಳಲ್ಲಿನ ಕ್ರೀಡಾ ಹಾಸ್ಟೆಲ್‌ಗಳಿಗೆ ಭೇಟಿ ನೀಡಿದ್ದೇನೆ. ಸೌಲಭ್ಯಗಳ ಕೊರತೆ ಇರುವುದು ಗಮನಕ್ಕೆ ಬಂದಿದೆ. ಅವರಿಗೆ ಅಗತ್ಯ ಸೌಲಭ್ಯ ಮತ್ತು ಹೈಟೆಕ್‌ ಕ್ರೀಡಾ ಉಪಕರಣಗಳನ್ನು ನೀಡಿ, ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಸಜ್ಜುಗೊಳಿಸಬೇಕು’ ಎಂದು ಆಯೋಗದ ಸದಸ್ಯ ಶಶಿಧರ ಕೋಸಂಬೆ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT