ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೌರ ಸ್ವಉದ್ಯೋಗ ಸಮ್ಮೇಳನಕ್ಕೆ ಚಾಲನೆ

Published 16 ನವೆಂಬರ್ 2023, 14:35 IST
Last Updated 16 ನವೆಂಬರ್ 2023, 14:35 IST
ಅಕ್ಷರ ಗಾತ್ರ

ಬೆಳಗಾವಿ: ‘ಸೌರ ವಿದ್ಯುತ್‌ ವ್ಯವಸ್ಥೆ ಮೂಲಕ ವಿಶೇಷಚೇತನರಿಗೆ ಉದ್ಯೋಗ ಸೃಷ್ಟಿಸುತ್ತಿರುವ ಸೆಲ್ಕೋ ಫೌಂಡೇಷನ್‌ ಕಾರ್ಯ ಶ್ಲಾಘನೀಯ’ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್‌ ಭೊಯರ್‌ ಹೇಳಿದರು.

ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶೇಷಚೇತನರ ಸೌರ ಸ್ವಉದ್ಯೋಗ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

‘ಸೆಲ್ಕೋ ಫೌಂಡೇಷನ್‌ ಸಮಾಜದಲ್ಲಿ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದೆ. ಸ್ವಯಂಉದ್ಯೋಗ ಕೈಗೊಳ್ಳಲು ಅವಕಾಶ ಕಲ್ಪಿಸಿ, ವಿಶೇಷಚೇತನರ ಬಾಳಿಗೆ ಬೆಳಕಾಗಿದೆ’ ಎಂದು ಶ್ಲಾಘಿಸಿದರು.

ಕೃಷಿ ಇಲಾಖೆ ಜಂಟಿನಿರ್ದೇಶಕ ಶಿವನಗೌಡ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್‌.ನಾಗರಾಜ, ಸೆಲ್ಕೋ ಫೌಂಡೇಷನ್‌ ಉಪ ಪ್ರಧಾನ ವ್ಯವಸ್ಥಾಪಕ ಪ್ರಸನ್ನ ಹೆಗಡೆ, ಹಿರಿಯ ಕಾರ್ಯಕ್ರಮ ನಿರ್ದೇಶಕಿ ಆರ್‌.ಸುರಭಿ, ಹಿರಿಯ ಯೋಜನಾ ವ್ಯವಸ್ಥಾಪಕ ವೀರೇಶ ತಡಹಾಳ, ಯೋಜನಾ ವ್ಯವಸ್ಥಾಪಕ ಪ್ರಕಾಶ ಮೇಟಿ ಇತರರಿದ್ದರು. ವಲಯ ವ್ಯವಸ್ಥಾಪಕ ವಿನಾಯಕ ಹೆಗಡೆ ಕಾರ್ಯಕ್ರಮ ನಿರೂಪಿಸಿದರು. 

ನಂತರ ನಡೆದ ಎರಡು ಗೋಷ್ಠಿಗಳಲ್ಲಿ ಉದ್ಯಮಿಗಳು ತಮ್ಮ ಯಶೋಗಾಥೆ ಬಿಚ್ಚಿಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT