ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೃದಯಾಘಾತದಿಂದ ಯೋಧ ಸಾವು: ಗೋಕಾಕದ ಮೇಲ್ಮಟ್ಟಿಯಲ್ಲಿ ಪಾರ್ಥಿವ ಶರೀರದ ಮೆರವಣಿಗೆ

Last Updated 14 ಸೆಪ್ಟೆಂಬರ್ 2022, 14:34 IST
ಅಕ್ಷರ ಗಾತ್ರ

ಗೋಕಾಕ (ಬೆಳಗಾವಿ ಜಿಲ್ಲೆ): ಹೃದಯಾಘಾತದಿಂದ ಮಂಗಳವಾರ ನಿಧನರಾದ ಯೋಧ ಶಂಕರ್ಯಲಿಗಾರ (33) ಅವರ ಮೃತದೇಹವನ್ನು ಬುಧವಾರ ಅವರ ಹುಟ್ಟೂರಾದ ಗೋಕಾಕ ತಾಲ್ಲೂಕಿನ ಮೇಲ್ಮಟ್ಟಿಗೆ ತರಲಾಯಿತು.

ಅಪಾರ ಸಂಖ್ಯೆಯಲ್ಲಿ ಸೇರಿದ ಸುತ್ತಮುತ್ತಲಿನ ಗ್ರಾಮಗಳ ಜನ, ಯೋಧನ ಮೃತದೇಹಕ್ಕೆಗೌರವಪೂರ್ಣ ಸ್ವಾಗತ ಕೋರಿದರು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ.ನಂದಗಾವಿ ಹಾಗೂ ಡಿಎಆರ್ ಎಸ್ಪಿ ವೈ.ಕೆ. ಕಾಶಪ್ಪನವರ ಅವರು ಪುಷ್ಪಗುಚ್ಛ ಸಮರ್ಪಿಸಿ ಗೌರವ ಸಲ್ಲಿಸಿದರು.

ಮಹಾರಾಷ್ಟ್ರದ ಔರಂಗಾಬಾದನಲ್ಲಿ ಮಂಗಳವಾರ ಮಧ್ಯಾಹ್ನ ಕೆಲಸದಲ್ಲಿ ಇದ್ದಾಗಲೇ ಯೋಧನಿಗೆ ಹೃದಯಾಘಾತವಾಯಿತು. ತಕ್ಷಣ ಅವರನ್ನು ಔರಂಗಾಬಾದನ ಮಿಲಿಟರಿ ಆಸ್ಪತ್ರೆಗೆ ಸೇರಿಸಲಾಯಿತು. ಅಷ್ಟೊತ್ತಿಗೆ ಅವರು ಕೊನೆಯುಸಿರೆಳೆದರು.

ಮೃತದೇಹವನ್ನುಗ್ರಾಮಕ್ಕೆ ತಂದಾಗ ದುಃಖ ಮಡುಗಟ್ಟಿತು. ಯೋಧನ ಕುಟುಂಬದವರು, ಬಂಧುಗಳು, ಸ್ನೇಹಿತರು ಕಣ್ಣೀರಾದರು.

ತೆರೆದ ವಾಹನವನ್ನು ಪುಷ್ಪಗಳಿಗೆ ಅಲಂಕರಿಸಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಶಾಲೆ ಆವರಣದಲ್ಲಿ ಯೋಧನ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT