ನಿಪ್ಪಾಣಿ: ಮಹಾರಾಷ್ಟ್ರದ ಪುಣೆಯ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಲ್ಲೂಕಿನ ಭಾಟನಾಗನೂರ ಗ್ರಾಮದ ಯೋಧ ದೀಪಕ ಗೋವಿಂದ ಪಾಟೀಲ (35) ಶನಿವಾರ ನಿಧನರಾದರು.

ಭಾಟನಾಗನೂರ ಗ್ರಾಮದಲ್ಲಿ ಭಾನುವಾರ ಪಾರ್ಥೀವ ಶರೀರದ ಮೆರವಣಿಗೆ ನಡೆಯಿತು. ಬಳಿಕ ಸಕಲ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಕ್ರಿಯೆ ನಡೆಯಿತು.

ಅವರು 2010ರಲ್ಲಿ ಸೇನೆಗೆ ಸೇರಿದ್ದರು. ಜಮ್ಮು ಕಾಶ್ಮೀರದ ಹಿಮಭರಿತ ಪ್ರದೇಶದಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಕಳೆದ ಡಿಸೆಂಬರ್ನಲ್ಲಿ ಅವರು ಅನಾರೋಗ್ಯಕ್ಕೀಡಾಗಿದ್ದರು. 8 ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.

ದೀಪಕ ಪಾಟೀಲ ಅವರಿಗೆ ಪತ್ನಿ, ಇಬ್ಬರು ಪುತ್ರಿಯರು, ತಂದೆ-ತಾಯಿ, ಸಹೋದರರು ಇದ್ದಾರೆ.

ಶಾಸಕಿ ಶಶಿಕಲಾ ಜೊಲ್ಲೆ, ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪಂಕಜ ಪಾಟೀಲ, ತಹಶೀಲ್ದಾರ್, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಬಟಾಲಿಯನ್ನ ಯೋಧರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.