‘ಯೋಗದ ನಡಿಗೆ- ಆರೋಗ್ಯದೆಡೆಗೆ’ ಜಾಥಾ

7

‘ಯೋಗದ ನಡಿಗೆ- ಆರೋಗ್ಯದೆಡೆಗೆ’ ಜಾಥಾ

Published:
Updated:
ಬೆಳಗಾವಿಯಲ್ಲಿ ಜಿಲ್ಲಾಡಳಿತದಿಂದ ಬುಧವಾರ ಆಯೋಜಿಸಿದ್ದ ಯೋಗ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಹಸಿರುನಿಶಾನೆ ತೋರಿದರು

ಬೆಳಗಾವಿ: ‘ಯೋಗವು ಭಾರತದ ಪರಂಪರೆಯಾಗಿದೆ. ಇದರ ಮಹತ್ವ ಅರಿತಿರುವ ಜಗತ್ತಿನ ಇತರ ರಾಷ್ಟ್ರಗಳು ನಮ್ಮ ದೇಶದತ್ತ ನೋಡುವಂತಾಗಿವೆ’ ಎಂದು ಸಂಸದ ಸುರೇಶ ಅಂಗಡಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಆಯುಷ್ ಇಲಾಖೆ, ಆರೋಗ್ಯ, ಸಾರ್ವಜನಿಕ ಶಿಕ್ಷಣ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್, ಭಾರತ ಸೇವಾದಳ, ನೆಹರೂ ಯುವ ಕೇಂದ್ರ ಹಾಗೂ ಸಂಘ-ಸಂಸ್ಥೆಗಳ ವತಿಯಿಂದ ಬುಧವಾರ ಆಯೋಜಿಸಿದ್ದ ‘ಯೋಗ ನಡಿಗೆ- ಆರೋಗ್ಯದೆಡೆಗೆ’ ಜಾಗೃತಿ ಜಾಥಾದಲ್ಲಿ ಮಾತನಾಡಿದರು.

‘ಯೋಗದ ಮಹತ್ವ ಪಸರಿಸಲು ಕೇಂದ್ರ ಸರ್ಕಾರ ಹಲವು ಕಾರ್ಯಕ್ರಮ ನಡೆಸಿದೆ. ಯೋಗದಿಂದ ಆರೋಗ್ಯ ಮಾತ್ರವಲ್ಲ; ಮಾನಸಿಕ ನೆಮ್ಮದಿಯೂ ದೊರೆಯುತ್ತದೆ’ ಎಂದರು.

ಜಿಲ್ಲಾ ಪಂಚಾಯ್ತಿ ಸಿಇಒ ಆರ್‌. ರಾಮಚಂದ್ರನ್ ಮಾತನಾಡಿದರು.

ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಜಾಥಾಕ್ಕೆ ಚಾಲನೆ ನೀಡಿದರು. ಚನ್ನಮ್ಮ ವೃತ್ತ, ಕಾಲೇಜು ರಸ್ತೆ ಮೂಲಕ ಬೋಗಾರ್‌ವೇಸ್ ವೃತ್ತದಲ್ಲಿ ಮುಕ್ತಾಯಗೊಂಡಿತು. ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಸ್ಕೌಟ್ಸ್ ಮತ್ತು ಗೈಡ್ಸ್ ಕೆಡೆಟ್‌ಗಳು, ಸೇವಾದಳದ ಕಾರ್ಯಕರ್ತರು, ಜಿಲ್ಲಾ ಆಯುಷ್ ಅಧಿಕಾರಿ ಡಾ.ಸುರೇಶ ದೊಡವಾಡ, ಡಾ.ಸುರೇಶ ಸುಣಧೋಳಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !