ಮಂಗಳವಾರ, ನವೆಂಬರ್ 29, 2022
21 °C

ಚಿಕ್ಕೋಡಿ: ಸರ್ಕಾರಿ ಗೌರವದೊಂದಿಗೆ ಯೋಧ ಸೂರಜ್ ಅಂತ್ಯಕ್ರಿಯೆ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕೋಡಿ(ಬೆಳಗಾವಿ ಜಿಲ್ಲೆ): ಪಶ್ಚಿಮ ಬಂಗಾಳದ ಪಂಜಿಪಾಡಾದಲ್ಲಿ ಸೋಮವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಯೋಧ ಸೂರ‌ಜ್‌ ಧೋಂಡಿರಾಮ ಸುತಾರ ಅವರ ಅಂತ್ಯಕ್ರಿಯೆ ಚಿಕ್ಕೋಡಿ ತಾಲ್ಲೂಕಿನ ಯಡೂರವಾಡಿಯಲ್ಲಿ ಬುಧವಾರ ಸರ್ಕಾರಿ ಗೌರವದೊಂದಿಗೆ ನಡೆಯಿತು.

ಸಾಂಬ್ರಾ ವಿಮಾನ ನಿಲ್ದಾಣದಿಂದ ಯಡೂರವಾಡಿಗೆ ಪಾರ್ಥಿವ ಶರೀರ ತಲುಪಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. 

ಚಿಂಚಣಿಯ ಅಲ್ಲಮಪ್ರಭು ಸ್ವಾಮೀಜಿ. ಚರಮೂರ್ತಿಮಠದ ಸಂಪಾದನ ಸ್ವಾಮೀಜಿ. ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ಶಾಸಕ ಗಣೇಶ ಹುಕ್ಕೇರಿ ಅವರು ಯೋಧನಿಗೆ ಅಂತಿಮ ನಮನ ಸಲ್ಲಿಸಿದರು. ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಇದನ್ನೂ ಓದಿ..

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು