ಮಂಗಳವಾರ, ಜನವರಿ 26, 2021
28 °C

ಗೋಮಾಂಸ ಮಾರುಕಟ್ಟೆ ಸ್ಥಳಾಂತರಿಸಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಪ್ರಾಣಿಗಳಿಗೂ ಆಂಬುಲೆನ್ಸ್‌ ಸೌಲಭ್ಯ ಕಲ್ಪಿಸುವುದು ಸೇರಿದಂತೆ 4 ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಅವರಿಗೆ ಇಲ್ಲಿ ಶುಕ್ರವಾರ ಸಲ್ಲಿಸಿದರು.

‘ನಗರದ ಮಧ್ಯದಲ್ಲಿರುವ ಗೋಮಾಂಸದ ಮಾರುಕಟ್ಟೆಯನ್ನು ನಗರದಿಂದ ಹೊರಗೆ ಸ್ಥಳಾಂತರಿಸಬೇಕು. ನಗರದಲ್ಲಿರುವ ಬಿಡಾಡಿ ನಾಯಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಬೆಳಗಾವಿಯಲ್ಲಿ ಪ್ರಾಣಿ ಹಿಂಸೆ ತಡೆ ಸಮಿತಿ ರಚಿಸಬೇಕು’ ಎಂದು ಒತ್ತಾಯಿಸಿದರು.

‘ಗೋಮಾಂಸ ಮಾರುಕಟ್ಟೆ ಜನನಿಬಿಡ ಪ್ರದೇಶದಲ್ಲಿದೆ. ಇದರಿಂದ ಜನರಿಗೆ ತೊಂದರೆ ಆಗುತ್ತಿದೆ. ಅದನ್ನು ಸ್ಥಳಾಂತರಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು. ನಗರದಲ್ಲಿ ಬೀದಿನಾಯಿಗಳ ಸಂಖ್ಯೆ ಅತಿಯಾಗಿದ್ದು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಅವುಗಳಿಗೆ ಪುನರ್ವಸತಿ ಕಲ್ಪಿಸಬೇಕು. ಈ ಕುರಿತು ಸಂಬಂಧಿಸಿದವರಿಗೆ ಸೂಚನೆ ನೀಡಬೇಕು’ ಎಂದು ಕೋರಿದರು.

‘ಜಿಲ್ಲೆಯಲ್ಲಿ ಪ್ರಾಣಿ ಹಿಂಸೆ ತಡೆ ಸಮಿತಿ ರಚಿಸುವಂತೆ ಪಶುಸಂಗೋಪನಾ ಇಲಾಖೆ ಉಪ ನಿರ್ದೇಶಕರಿಗೆ ಹಲವು ಬಾರಿ ಕೋರಿದರೂ ಕ್ರಮ ಕೈಗೊಂಡಿಲ್ಲ. ತಕ್ಷಣ ಜಿಲ್ಲಾಧಿಕಾರಿಗೆ ಸೂಚಿಸಬೇಕು’ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.