ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋ ಹತ್ಯೆ ನಿಷೇಧ: ಸೋನಾಲಿ ಹರ್ಷ

Last Updated 6 ಜನವರಿ 2021, 16:02 IST
ಅಕ್ಷರ ಗಾತ್ರ

ಬೆಳಗಾವಿ: ‘ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸುವುದು ಗೋರಕ್ಷಕರ ಬಹುದಿನಗಳ ಕನಸಾಗಿತ್ತು. ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ ಜಾರಿಗೊಳಿಸುವ ಮೂಲಕ ಲಕ್ಷಾಂತರ ಗೋ ರಕ್ಷಕರ ಕನಸು ನನಸು ಮಾಡಿದೆ. ಈ ಕ್ರಮ ರಾಜ್ಯದಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ’ ಎಂದು ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯೆ ಡಾ.ಸೋನಾಲಿ ಸರ್ನೋಬತ್ ಹರ್ಷ ವ್ಯಕ್ತಪಡಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ಸರ್ಕಾರ ಹೊರಡಿಸಿದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕುವ ಮೂಲಕ ರಾಜ್ಯದ ಹಿತವನ್ನು ಕಾಪಾಡಿದ್ದು ಅಭಿನಂದಾರ್ಹ ಸಂಗತಿಯಾಗಿದೆ. ಸರ್ಕಾರ ನುಡಿದಂತೆ ನಡೆದಿದೆ. ಕೊಟ್ಟ ಭರವಸೆ ಈಡೇರಿಸುವ ಮೂಲಕ ಜನರ ಪ್ರೀತಿಗೆ ಪಾತ್ರವಾಗಿದೆ’ ಎಂದು ಹೇಳಿದ್ದಾರೆ.

‘ಈ ಸುಸಂದರ್ಭದಲ್ಲಿ ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯೆಯಾಗಿದ್ದು ನನ್ನ ಪುಣ್ಯವಾಗಿದೆ. ರಾಜ್ಯದಾದ್ಯಂತ ಸಂಚರಿಸಿ ಕಾಯ್ದೆ ಅನುಷ್ಠಾನದ ಬಗ್ಗೆ ನಿಗಾ ವಹಿಸುತ್ತೇನೆ. ಕರ್ನಾಟಕದಲ್ಲಿ ಈಗ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಉಲ್ಲಂಘನೆ ಮಾಡುವವರ ಮೇಲೆ ನಿರಂತರವಾಗಿ ನಿಗಾ ಇಡಲಾಗುವುದು. ರಾಜ್ಯದ ವಿವಿಧ ಜಿಲ್ಲೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಕಾಯ್ದೆ ಉಲ್ಲಂಘನೆ ಮಾಡುವವರ ಮೇಲೆ ಕ್ರಮ ವಹಿಸಲಾಗುವುದು. ನನಗೆ ದೊರೆತಿರುವ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕವಾಗಿ ನಿಭಾಯಿಸುವ ಸಂಕಲ್ಪ ಮಾಡಿದ್ದೇನೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT