ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸ್ಪರ್ಧಾ ಸಂಗಮ’ ಸಮಾರೋ‍‍ಪ ಸಮಾರಂಭ: ಸಂತ ಕ್ಸೇವಿಯರ್‌ ಶಾಲೆಗೆ ಸಮಗ್ರ ವೀರಾಗ್ರಣಿ

Last Updated 27 ನವೆಂಬರ್ 2021, 14:09 IST
ಅಕ್ಷರ ಗಾತ್ರ

ಬೆಳಗಾವಿ: ‘ವಿದ್ಯಾರ್ಥಿಗಳು ಪಠ್ಯಪುಸ್ತಕದ ಜ್ಞಾನದೊಂದಿಗೆ ಸಂಸ್ಕಾರವನ್ನೂ ಬೆಳೆಸಿಕೊಳ್ಳಬೇಕು’ ಎಂದು ನಾಗನೂರು ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ಸಲಹೆ ನೀಡಿದರು.

ಇಲ್ಲಿನ ಶಿವಬಸವನಗರದ ಸಿದ್ದರಾಮೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಲಿಂ.ಶಿವಬಸವ ಸ್ವಾಮೀಜಿ ಅವರ 132ನೇ ಜಯಂತ್ಯುತ್ಸವ ಅಂಗವಾಗಿ ಶನಿವಾರ ಆಯೋಜಿಸಿದ್ದ ‘ಸ್ಪರ್ಧಾ ಸಂಗಮ’ ಸಮಾರೋ‍‍ಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.

‘ಗುರು–ಹಿರಿಯರಿಗೆ ಗೌರವ ಕೊಡಬೇಕು. ಮಾನವೀಯ ಗುಣಗಳನ್ನು ರೂಢಿಸಿಕೊಳ್ಳಬೇಕು’ ಎಂದು ತಿಳಿಸಿದರು.

ಜಿಲ್ಲೆಯ ಎಲ್ಲ ನಗರ ಹಾಗೂ ಗ್ರಾಮೀಣ ವಲಯದಲ್ಲಿ ಓದುತ್ತಿರುವ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ಪರ್ಧೆ ನಡೆಸಲಾಯಿತು. 50 ಶಾಲೆಗಳ 300 ವಿದ್ಯಾರ್ಥಿಗಳು ಸ್ಪರ್ಧಿಸಿದ್ದರು. ನಗರದ ಸಂತ ಕ್ಸೇವಿಯರ್‌ ಶಾಲೆಯ ವಿದ್ಯಾರ್ಥಿಗಳು ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಶೇಗುಣಸಿ ವಿರಕ್ತಮಠದ ಮಹಾಂತ ದೇವರು ಸಾನ್ನಿಧ್ಯ ವಹಿಸಿದ್ದರು. ಕಾಲೇಜಿನ ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಎಂ.ಆರ್. ಉಳ್ಳೇಗಡ್ಡಿ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ಗುರುದೇವಿ ಹುಲೆಪ್ಪನವರಮಠ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿ ಕೆ.ಬಿ. ಹಿರೇಮಠ, ಪ.ಪೂ. ಕಾಲೇಜಿನ ಪ್ರಾಚಾರ್ಯ ಸಿದ್ದರಾಮ ರೆಡ್ಡಿ ಮತ್ತು ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರವೀಣ ಎಸ್. ಪಾಟೀಲ ಪಾಲ್ಗೊಂಡಿದ್ದರು.

ಎ.ಕೆ. ಪಾಟೀಲ ಸ್ವಾಗತಿಸಿದರು. ದೈಹಿಕ ಶಿಕ್ಷಣ ಉಪನ್ಯಾಸಕ ಪಿ.ಡಿ. ಶಿವನಾಯ್ಕರ ಗ್ರಂಥ ಪುಷ್ಪಾರ್ಪಣೆ ಮಾಡಿದರು. ಗಿರಿಜಾದೇವಿ ಸುಂಕದನಿರೂಪಿಸಿದರು. ಮಂಜುಳಾ ಬೀರಣ್ಣವರ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT