ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಚ್‌ಸಿಗಳಲ್ಲಿ ಮಕ್ಕಳಿಗೆ ವಿಶೇಷ ಹಾಸಿಗೆ

Last Updated 23 ಜೂನ್ 2021, 16:18 IST
ಅಕ್ಷರ ಗಾತ್ರ

ಬೆಳಗಾವಿ: ‘ಕೋವಿಡ್ 3ನೇ ಅಲೆಯ ನಿರ್ವಹಣೆಗಾಗಿ ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಮಕ್ಕಳ ಆರೈಕೆ ಹಾಗೂ ಪಾಲನೆಗಾಗಿ ಕೇಂದ್ರಗಳನ್ನು ಗುರುತಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವಿಶೇಷ ಹಾಸಿಗೆಗಳ ವ್ಯವಸ್ಥೆ ಕಲ್ಪಿಸಲಾಗಿದೆ’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಇಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಆರೈಕೆ ಮತ್ತು ರಕ್ಷಣೆಗಾಗಿ ಗುರುತಿಸುವ 7ರಿಂದ 18 ವರ್ಷದ ಬಾಲಕರು ಹಾಗೂ ಬಾಲಕಿಯರಿಗೆ ಪ್ರತ್ಯೇಕ ಮಕ್ಕಳ ಕ್ವಾರೆಂಟೇನ್ ಕೇಂದ್ರಗಳನ್ನು ತೆರೆಯಲಾಗಿದೆ. 6 ವರ್ಷದೊಳಗಿನ ಮಕ್ಕಳಿಗೆ ಪ್ರತ್ಯೇಕ ಪಾಲನಾ ಕೇಂದ್ರಗಳಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ’ ಎಂದರು.

‘ಪಾಲಕರು ಕೋವಿಡ್ ಸೋಂಕಿಗೆ ಒಳಗಾದಾಗ, ತಾತ್ಕಾಲಿಕ ರಕ್ಷಣೆ ಹಾಗೂ ಪೋಷಣೆಗೆ ಅಗತ್ಯವಿರುವ ಮಕ್ಕಳಿಗೆ ಪಾಲನೆ ಸಂಸ್ಥೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಸರ್ಕಾರಿ ಅನುದಾನಿತ ಮಕ್ಕಳ ಪಾಲನಾ ಸಂಸ್ಥೆಗಳನ್ನು ತಾಲ್ಲೂಕುವಾರು ಮಕ್ಕಳ ಆರೈಕೆ ಕೇಂದ್ರಗಳನ್ನಾಗಿ ರಚಿಸಲಾಗಿದೆ. ಕೋವಿಡ್ 3ನೇ ಅಲೆಯ ತುರ್ತು ಸಂಧರ್ಬದಲ್ಲಿ ಮಕ್ಕಳ ಆರೈಕೆಗಾಗಿ ಕೇಂದ್ರಗಳನ್ನು ಗುರುತಿಸಲಾಗಿದೆ’ ಎಂದು ವಿವರ ನೀಡಿದರು.

‘ಜಿಲ್ಲೆಯಲ್ಲಿ 75 ಆಮ್ಲಜನಕ ಹಾಸಿಗೆಗೆಳ ಸಾಮರ್ಥ್ಯದ ಮಕ್ಕಳ ವಾರ್ಡ್‌ಗಳನ್ನು ಈಗಾಗಲೇ ಗುರುತಿಸಲಾಗಿದೆ. 9 ತಾಲ್ಲೂಕು ಆಸ್ಪತ್ರೆ, 16 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಮುಂಜಾಗ್ರತಾ ಕ್ರಮವಾಗಿ 159 ಹಾಸಿಗೆಗಳು ಹಾಗೂ 139 ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೂ ಮಕ್ಕಳ ಚಿಕಿತ್ಸೆಗಾಗಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜಿಲ್ಲೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ 17 ಮಕ್ಕಳ ತಜ್ಞರಿದ್ದಾರೆ. ಪಿಎಚ್‌ಸಿಗಳಲ್ಲಿ ತಲಾ ಐದು ಹಾಸಿಗೆಗಳನ್ನು ಮಕ್ಕಳಿಗೆ ಕಾಯ್ದಿರಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT