ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ನಕಲಿ ಮತದಾನ ಆರೋಪ- ಗೊಂದಲ

Last Updated 3 ಸೆಪ್ಟೆಂಬರ್ 2021, 13:09 IST
ಅಕ್ಷರ ಗಾತ್ರ

ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ನಗರದ ಮಾಳಿ ಗಲ್ಲಿಯ ವಾರ್ಡ್‌ ನಂ.3ರ ಪ್ರಾಥಮಿಕ ಶಾಲೆಯ 3ನೇ ಬೂತ್‌ನಲ್ಲಿ ನಕಲಿ ಮತದಾನ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

‘ಕಾಂಗ್ರೆಸ್ ಅಭ್ಯರ್ಥಿ ಕಡೆಯವರು ನಕಲಿ ಮತದಾನ ಮಾಡಿದ್ದಾರೆ’ ಎಂದು ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಗಳು ಆರೋಪಿಸಿದರು. ಸಿಬ್ಬಂದಿ ವಿರುದ್ಧವೂ ಅಸಮಾಧಾನ ವ್ಯಕ್ತ‍ಪಡಿಸಿದರು. ಇದರಿಂದ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ವಿಷಯ ತಿಳಿದು ಸ್ಥಳಕ್ಕೆ ಬಂದ ಉತ್ತರ ಮತಕ್ಷೇತ್ರದ ಬಿಜೆಪಿ ಶಾಸಕ ಅನಿಲ ಬೆನಕೆ ಕಾರ್ಯಕರ್ತರೊಂದಿಗೆ ಚರ್ಚಿಸಿದರು. ಎಸಿಪಿ ಎನ್.ವಿ. ಭರಮನಿ ನೇತೃತ್ವದಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ ಸ್ಥಳಕ್ಕೆ ಭೇಟಿ ನೀಡಿ ಸಿಬ್ಬಂದಿಯೊಂದಿಗೆ ಚರ್ಚಿಸಿದರು.

‘ನಕಲಿ ಮತದಾನ ನಡೆಯುವುದಕ್ಕೆ ಕಾರಣವಾದ ಅಧಿಕಾರಿಗಳು ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗುವುದು. ಕ್ರಮ ಕೈಗೊಳ್ಳದಿದ್ದಲ್ಲಿ ಮರು ಚುನಾವಣೆ ನಡೆಸುವಂತೆ ಒತ್ತಾಯಿಸಲಾಗುವುದು’ ಎಂದು ಬೆನಕೆ ತಿಳಿಸಿದರು.

ಹೆಸರು ಮಾಯ: ಅಸಮಾಧಾನ

ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದಿದ್ದಕ್ಕೆ ಮತದಾರರು ಅಲ್ಲಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಅಜಂ ನಗರದಲ್ಲಿ ವಾರ್ಡ್ ನಂ.25ರಲ್ಲಿನ ನೂರಾರು ಮಂದಿಯ ಹೆಸರಿಗಳಿಲ್ಲ ಎಂದು ತಿಳಿಸಿದರು.

ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ವಾರ್ಡ್‌ ನಂ.11ರ ಮತಗಟ್ಟೆಯಲ್ಲಿ ಮತ ಹಾಕಿದ್ದೆವು. ಈಗ, ಸದಾಶಿವನಗರದ ಮತಗಟ್ಟೆಯಲ್ಲಿ ಹೆಸರು ಸೇರಿಸಲಾಗಿದೆ. ಈ ರೀತಿ ಬಹಳಷ್ಟು ಕಡೆ ಗೊಂದಲ ಉಂಟಾಗಿದೆ ಎಂದು ಕೆಲವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT