ಮಂಗಳವಾರ, ಜನವರಿ 18, 2022
27 °C

ಕನ್ನಡ ದಿನಪತ್ರಿಕೆಗಳ ಚರ್ಚೆಗೆ ವಿಶೇಷ ಕಾರ್ಯಕ್ರಮ: ಡಾ.ಸಿ. ಸೋಮಶೇಖರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಬೆಳಗಾವಿ: ‘ಗಡಿ ಭಾಗದಲ್ಲಿನ ಕನ್ನಡ ದಿನಪತ್ರಿಕೆಗಳ ಸ್ಥಿತಿಗತಿಗಳ ಕುರಿತು ಚರ್ಚೆಗಾಗಿ ವಿಶೇಷ ಕಾರ್ಯಕ್ರಮವನ್ನು ಫೆಬ್ರುವರಿಯಲ್ಲಿ ಇಲ್ಲೇ ಹಮ್ಮಿಕೊಳ್ಳಲಾಗುವುದು’ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ. ಸೋಮಶೇಖರ್ ಹೇಳಿದರು.

ಜಿಲ್ಲಾ ಮತ್ತು ಪ್ರಾದೇಶಿಕ ದಿನಪತ್ರಿಕೆಗಳ ಸಂಪಾದಕರ ಸಂಘದ ಅಧ್ಯಕ್ಷ ಮುರಗೇಶ ಶಿವಪೂಜಿ ಅವರೊಂದಿಗೆ ಇಲ್ಲಿನ ಹುಕ್ಕೇರಿ ಹಿರೇಮಠದಲ್ಲಿ ಸೋಮವಾರ ಅವರು ಮಾತನಾಡಿದರು.

‘ಗಡಿ ಭಾಗದಲ್ಲಿನ ಕನ್ನಡ ದಿನಪತ್ರಿಕೆಗಳ ಸಮಸ್ಯೆಗಳ ಮತ್ತು ಸ್ಥಿತಿಗತಿಗಳ ಕುರಿತು ವಿಸ್ತೃತವಾದ ಚರ್ಚೆ ನಡೆಸಿ, ಪರಿಹಾರ  ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು’ ಎಂದರು.

‘ಗಡಿಯಲ್ಲಿನ ಪ್ರತಿ ಕನ್ನಡ ಸರ್ಕಾರಿ ಶಾಲೆಗೆ ದಿನಪತ್ರಿಕೆಗಳನ್ನು ತರಿಸಿಕೊಳ್ಳುವುದು, ಕನ್ನಡ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಕುರಿತು ಪ್ರಾಧಿಕಾರವು ವಿಶೇಷ ಗಮನಹರಿಸಲಿದೆ’ ಎಂದು ಭರವಸೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು