ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೈಹಿಕ, ಮಾನಸಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ: ವಾಲಿಕರ

Published 9 ಜನವರಿ 2024, 16:19 IST
Last Updated 9 ಜನವರಿ 2024, 16:19 IST
ಅಕ್ಷರ ಗಾತ್ರ

ಗೋಕಾಕ: ‘ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಕ್ರೀಡೆಗಳು ಸಹಕಾರಿ. ಇವು ನಮ್ಮಲ್ಲಿ ಧೈರ್ಯ ಮತ್ತು ಸಾಹಸ ಗುಣಗಳನ್ನೂ ಬೆಳೆಸುತ್ತವೆ’ ಎಂದು ಗೋಕಾಕ ಶಹರ ಠಾಣೆಯ ಪಿಎಸ್ಐ ಕೆ.ವಾಲಿಕರ ಹೇಳಿದರು.

ಇಲ್ಲಿ ಹಮ್ಮಿಕೊಂಡಿದ್ದ ಗೋಕಾಕ ಶಿಕ್ಷಣ ಸಂಸ್ಥೆಯ ಜಿಇಎಸ್ ಪೂರ್ವ ಪ್ರಾಥಮಿಕ, ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ವಿಶ್ವನಾಥ ಕಡಕೋಳ ಮಾತನಾಡಿ, ‘ಕ್ರೀಡಾಕೂಟದಲ್ಲಿ ಗೆಲ್ಲಲು ಉತ್ತಮ ತರಬೇತಿ ಅಗತ್ಯ’ ಎಂದರು.

ಸಂಸ್ಥೆಯ ಕಾರ್ಯದರ್ಶಿ ಆರ್.ಎಂ.ವಾಲಿ, ಮುಖ್ಯಶಿಕ್ಷಕ ಎಸ್.ಕೆ.ಮಠದ, ಎಸ್.ಎಸ್.ಇಜೇರಿ, ಎ.ಎಂ.ಶೆಟ್ಟೆನ್ನವರ, ವೈ.ಎ.ಹನಗಂಡಿ, ಕೆ.ಎಚ್.ಮೇಟಿ ಇತರರಿದ್ದರು. ಎನ್.ಎ.ಕಬ್ಬೂರ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT