ಗೋಕಾಕ: ಸ್ಥಳೀಯ ಕ್ರೀಡಾಪಟುಗಳಿಗೆ ತಮ್ಮ ಕ್ರೀಡೆ ಪ್ರದರ್ಶಿಸಲು ಅನುಕೂಲವಾಗಲಿ ಎಂಬ ಸದುದ್ದೇಶದಿಂದ ಇಲ್ಲಿನ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣಕ್ಕೆ ಮೂಲ ಸೌಕರ್ಯಗಳನ್ನು ಒದಗಿಸಿ ಅಭಿವೃದ್ಧಿಗೊಳಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಸೋಮವಾರ ನಗರದ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಕೆ.ಬಿ.ಗ್ರೂಪ್ ವತಿಯಿಂದ ಆಯೋಜಿಸಲಾಗಿದ್ದ 2025-2026ನೇ ಸಾಲಿನ ಶ್ರೀ ಲಕ್ಷ್ಮಣರಾವ್ ಆರ್.ಜಾರಕಿಹೊಳಿ ಮೆಮೋರಿಯಲ್ ಸ್ಮಾರಕ ಕ್ರಿಕೆಟ್ ಟ್ರೋಫಿಗೆ ಚಾಲನೆ ನೀಡಿ ಮಾತನಾಡಿದರು.

ಸ್ಥಳೀಯ ಕ್ರೀಡಾಪಟುಗಳೆಲ್ಲರೂ ಬೆಂಗಳೂರಿಗೆ ಹೋಗಿ ಆಟ ಆಡಲು ಆಗುವುದಿಲ್ಲ. ನಗರಗಳಲ್ಲಿ ಸಿಗುವ ಸೌಲಭ್ಯಗಳು ಸ್ಥಳೀಯ ಕ್ರೀಡಾಪಟುಗಳಿಗೆ ದೊರಕಲೆಂಬ ಉದ್ದೇಶದಿಂದ ತಾಲ್ಲೂಕು ಮಟ್ಟದಲ್ಲಿಯೇ ಕಡಿಮೆ ಖರ್ಚಿನಲ್ಲಿ ವಾಲ್ಮೀಕಿ ಕ್ರೀಡಾಂಗಣಕ್ಕೆ ವಿದ್ಯುದ್ದೀಪಗಳ ಸೌಕರ್ಯ ಕಲ್ಪಿಸಿದ್ದೇವೆ. ಬೆಳಗಾವಿಯಲ್ಲಿಯೂ ₹50 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದೆ. ಗೋಕಾಕನಲ್ಲಿ ಮೊದಲು ಕ್ರಿಕೆಟ್ಗೆ ಅಷ್ಟೇ ಆದ್ಯತೆ ನೀಡುತ್ತಿದ್ದೆವು. ಆದರೆ ಇತ್ತಿಚೀನ ದಿನಗಳಲ್ಲಿ ಎಲ್ಲ ಕ್ರೀಡೆಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ವಿವರಿಸಿದರು.

ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಧಾರವಾಡ ವಲಯ ನಿಯಂತ್ರಕ ವೀರಣ್ಣ ಸವಡಿ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕರೂ ಆಗಿರುವ ಕೆಪಿಸಿಸಿ ಯುವ ಘಟಕದ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ, ಆದಿತ್ಯ ಜಾರಕಿಹೊಳಿ, ಕಿಶೋರ ಶೆಟ್ಟಿ, ಗೋಕಾಕ ಅರ್ಬನ್ ಬ್ಯಾಂಕ್ ಚೇರಮನ್ ಬಸವರಾಜ ಕಲ್ಯಾಣಶೆಟ್ಟಿ, ಹಿರೇಗೌಡ ನಾಯ್ಕರ್, ಶಿವಾನಂದ ಗುಂಜಾಲ್, ಅನಿಲ್ ಭವಾನಿ, ಶಿಶಿರ ಭವಾನಿ ಮೊದಲಾದವರು ಉಪಸ್ಥಿತರಿದ್ದರು.

ಗಮನ ಸೆಳೆದ ಸಹೋದರರ ಆಟ: ವಾಲ್ಮೀಕಿ ಕ್ರೀಡಾಂಗಣದಲ್ಲಿ ಆಯೋಜಿತ 2025-2026ನೇ ಸಾಲಿನ ಶ್ರೀ ಲಕ್ಷ್ಮಣರಾವ್ ಆರ್. ಜಾರಕಿಹೊಳಿ ಮೆಮೋರಿಯಲ್ ಸ್ಮಾರಕ್ ಕ್ರಿಕೆಟ್ ಟ್ರೋಫಿಗೆ ಚಾಲನೆ ನೀಡಿದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಬ್ಯಾಟಿಂಗ್ ಮಾಡಿದರೆ ಸಹೋದರ ಲಖನ್ ಜಾರಕಿಹೊಳಿ ಬೌಲಿಂಗ್ ಮಾಡುವ ಮೂಲಕ ದಿನದ ಪಂದ್ಯಾವಳಿ ವೀಕ್ಷೀಸಲು ಆಗಮಿಸಿದ್ದ ಪ್ರೇಕ್ಷಕಗಳ ಗಮನ ಸೆಳೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.