ಗುರುವಾರ , ಮಾರ್ಚ್ 23, 2023
30 °C

ಕ್ರೀಡಾ ಸಾಮಗ್ರಿಗಳ ಕಿಟ್ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗೋಕಾಕ (ಬೆಳಗಾವಿ ಜಿಲ್ಲೆ): ‘ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಿ ಸದೃಢ ಆರೋಗ್ಯ ಹೊಂದಿ ಸಾಧಕರಾಗಬೇಕು’ ಎಂದು ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಸಲಹೆ ನೀಡಿದರು.

ಇಲ್ಲಿನ ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಲ್ಲಿ ರಾಜ್ಯ ವಲಯ ಕ್ರೀಡಾ ತರಬೇತಿಯಲ್ಲಿ ಪಾಲ್ಗೊಂಡ 50 ಕ್ರೀಡಾಪಟುಗಳಿಗೆ ಹಾಗೂ ಗೋಕಾಕ ಮತಕ್ಷೇತ್ರದ 22 ಸರ್ಕಾರಿ ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳ ಕಿಟ್‌ಗಳನ್ನು ಸೋಮವಾರ ವಿತರಿಸಿ ಅವರು ಮಾತನಾಡಿದರು.

‘ಸರ್ಕಾರವು ಕ್ರೀಡಾಪಟುಗಳಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸುತ್ತಿದ್ದು, ಸದ್ಬಳಕೆ ಮಾಡಿಕೊಳ್ಳಬೇಕು. ಉಜ್ವಲ ಭವಿಷ್ಯ ರೂಪಿಸಿಕೊಂಡು ತಾಲ್ಲೂಕಿಗೆ ಕೀರ್ತಿ ತರಬೇಕು’ ಎಂದರು.

ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಸದಸ್ಯ ಅಬ್ಬಾಸ ದೇಸಾಯಿ, ಬಿಜೆಪಿ ನಗರ ಘಟಕದ ಅಧ್ಯಕ್ಷ ಭೀಮಶಿ ಭರಮಣ್ಣವರ, ಮುಖಂಡರಾದ ಮುಖಂಡರಾದ ತುಕಾರಾಮ ಕಾಗಲ, ಮಡ್ಡೆಪ್ಪ ತೋಳಿನವರ, ದುರ್ಗಪ್ಪ ಶಾಸ್ತ್ರಿ ಗೊಲ್ಲರ, ಲಕ್ಕಪ್ಪ ಮಾಳಗಿ, ಬಿಇಒ ಜಿ.ಬಿ. ಬಳಗಾರ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅನುಷ್ಠಾನ ಅಧಿಕಾರಿ ಎಂ.ಪಿ. ಮರನೂರ, ಸಿಬ್ಬಂದಿ ಎಸ್.ಡಿ. ನಗಾರಿ, ದೈಹಿಕ ಪರಿವೀಕ್ಷಕ ಎಲ್.ಕೆ. ತೋರಣಗಟ್ಟಿ ಇದ್ದರು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು