ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಷರಫ್‌ ಬಂಧನಕ್ಕೆ ಆದೇಶ

Last Updated 9 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ದೇಶದ್ರೋಹ ಆರೋಪ ಎದುರಿಸುತ್ತಿರುವ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್‌ ಮುಷರಫ್‌ ಅವರನ್ನು ಬಂಧಿಸಿ, ಆಸ್ತಿಯನ್ನು ಮುಟ್ಟುಗೋಲು ಹಾಕುವಂತೆ ಪಾಕಿಸ್ತಾನದ ವಿಶೇಷ ನ್ಯಾಯಾಲಯ ಸರ್ಕಾರಕ್ಕೆ ಆದೇಶಿಸಿದೆ.

2007ರಲ್ಲಿ  ತುರ್ತು ಪರಿಸ್ಥಿತಿ ಹೇರಿಕೆ ಮಾಡಿರುವ ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯವು ಮುಷರಫ್‌ ಅವರನ್ನು ‘ಘೋಷಿತ ಅಪರಾಧಿ’ ಎಂದು ಪ್ರಕಟಿಸಿ ಈ ಆದೇಶ ನೀಡಿದೆ.

ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಹಲವು ಮಂದಿ ನ್ಯಾಯಾಧೀಶರನ್ನು ಗೃಹಬಂಧನದಲ್ಲಿ ಇರಿಸಲಾಗಿತ್ತು. 100ಕ್ಕೂ ಹೆಚ್ಚು ನ್ಯಾಯಾಧೀಶರನ್ನು ವಶಕ್ಕೆ ಪಡೆಯಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ 2014ರಲ್ಲಿ ಮುಷರಫ್‌ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.

ಹೆಚ್ಚಿನ ದೇಶದ್ರೋಹ ಪ್ರಕರಣಗಳ ಅಪರಾಧಿಗಳಿಗೆ ಇಲ್ಲಿನ ನ್ಯಾಯಾಲಯವು ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆ ವಿಧಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT