ಬುಧವಾರ, ಜುಲೈ 28, 2021
28 °C
ಬೆಳಗಾವಿ ಲೋಕಸಭಾ ಉಪ ಚುನಾವಣೆ

ಬೆಳಗಾವಿ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಾಧ್ಯತೆ: ಪ್ರಮೋದ ಮುತಾಲಿಕ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

DH File

ಹುಬ್ಬಳ್ಳಿ: 'ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ನನಗೆ ಟಿಕೆಟ್ ಸಿಗುವ ಸಾಧ್ಯತೆಯಿದೆ' ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ವಿಶ್ವಾಸ ವ್ಯಕ್ತಪಡಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಟಿಕೆಟ್ ನೀಡುವ ವಿಚಾರದಲ್ಲಿ ಪಕ್ಷದ ಎಲ್ಲ ಪ್ರಮುಖರನ್ನು ಭೇಟಿಯಾಗಿ ಚರ್ಚಿಸಿದ್ದೇನೆ. ಅವರೆಲ್ಲ ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ. ಶೇ 90ರಷ್ಟು ನನಗೇ ಟಿಕೆಟ್ ಸಿಗುವ ಸಾಧ್ಯತೆಯಿದೆ. ಕೊನೆ ಘಳಿಗೆಯಲ್ಲಿ ರಾಜಕೀಯ ಬೆಳವಣಿಗೆ ಏನೂ ಆಗಬಹುದು' ಎಂದರು.

'ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧಿಸುವ ಇಚ್ಛೆಯಂತೂ ಇಲ್ಲ. ಯಾರಿಗೆ ಟಿಕೆಟ್ ಸಿಗುತ್ತದೆಯೋ ಅವರ ಪರ ಪ್ರಚಾರಕ್ಕೆ ಕರೆದರೆ ಹೋಗುತ್ತೇನೆ. ಇದು ನನ್ನ ರಾಜಕೀಯದ ಕೊನೆಯ ಹಂತ. ಮುಂಬರುವ ದಿನಗಳಲ್ಲಿ‌ ರಾಜಕೀಯ ನಿವೃತ್ತಿ ಪಡೆಯುತ್ತೇನೆ' ಎಂದು ಹೇಳಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು