ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ | ಎಸ್ಸೆಸ್ಸೆಲ್ಸಿ: ಮೊದಲ ದಿನ ಸುಗಮ

ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 292, ಚಿಕ್ಕೋಡಿಯಲ್ಲಿ 548 ವಿದ್ಯಾರ್ಥಿಗಳು ಗೈರು
Published 25 ಮಾರ್ಚ್ 2024, 16:15 IST
Last Updated 25 ಮಾರ್ಚ್ 2024, 16:15 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯಲ್ಲಿ ಆರಂಭಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆ ಮೊದಲ ದಿನವಾದ ಸೋಮವಾರ ಸುಗಮವಾಗಿ ನಡೆಯಿತು. 224 ಕೇಂದ್ರಗಳಲ್ಲಿ ನಡೆದ ಪ್ರಥಮ ಭಾಷೆ ಪರೀಕ್ಷೆಗೆ 840 ವಿದ್ಯಾರ್ಥಿಗಳು ಗೈರು ಹಾಜರಾದರು.

ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 33,009 ವಿದ್ಯಾರ್ಥಿಗಳ ಪೈಕಿ 32,717 ವಿದ್ಯಾರ್ಥಿಗಳು ಹಾಜರಾದರು. 292 ಮಂದಿ ಗೈರು ಹಾಜರಾದರು.

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 44,947 ವಿದ್ಯಾರ್ಥಿಗಳ ಪೈಕಿ 44,399 ವಿದ್ಯಾರ್ಥಿಗಳು ಹಾಜರಾದರು. 548 ವಿದ್ಯಾರ್ಥಿಗಳು ಗೈರಾದರು.

‘ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಸುಗಮವಾಗಿ ಪರೀಕ್ಷೆ ನಡೆದಿದೆ. ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿ ಕೇಂದ್ರದಲ್ಲಿ ಅನಾರೋಗ್ಯದ ಕಾರಣಕ್ಕೆ, ವಿದ್ಯಾರ್ಥಿನಿಯೊಬ್ಬಳು ಮೂರ್ಛೆ ಹೋಗಿದ್ದಳು. ತಕ್ಷಣವೇ ಚಿಕಿತ್ಸೆ ಒದಗಿಸಿದ್ದರಿಂದ ಚೇತರಿಸಿಕೊಂಡು ಪರೀಕ್ಷೆ ಬರೆದಿದ್ದಾಳೆ. ಮಕ್ಕಳಿಗೆ ಎಲ್ಲಿಯೂ ತೊಂದರೆಯಾಗಿಲ್ಲ’ ಎಂದು ಡಿಡಿಪಿಐ ಮೋಹನಕುಮಾರ ಹಂಚಾಟೆ ‘ಪ್ರಜಾವಾಣಿ’ಗೆ ತಿಳಿಸಿದರು.

ಹೋಳಿ ಹುಣ್ಣಿಮೆ ಅಂಗವಾಗಿ ಬೆಳಗಾವಿಯಲ್ಲಿ ಬಣ್ಣದಾಟವಿದ್ದ ಕಾರಣ, ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳಿಗೆ ತುಸು ತೊಂದರೆಯಾಯಿತು. ಪರೀಕ್ಷೆ ಮುಗಿದ ನಂತರ ವಿದ್ಯಾರ್ಥಿಗಳು ಏಕಕಾಲಕ್ಕೆ ಹೊರಬಂದಿದ್ದರಿಂದ ಮತ್ತು ಜನರು ಅಲ್ಲಿಯೇ ಬಣ್ಣವಾಡುತ್ತಿದ್ದ ಕಾರಣ, ಸಂಗೊಳ್ಳಿ ರಾಯಣ್ಣ ವೃತ್ತದಿಂದ ರಾಣಿ ಚನ್ನಮ್ಮನ ವೃತ್ತಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಸಂಚಾರ ಸಮಸ್ಯೆ ತಲೆದೋರಿತ್ತು.

ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಸಾರಿಗೆ ಸಂಸ್ಥೆಯು ‘ಹೋಳಿ’ ಹಬ್ಬದ ಆಚರಣೆ ಮಧ್ಯೆಯೂ, ಬಸ್‌ ವ್ಯವಸ್ಥೆ ಕಲ್ಪಿಸಿತ್ತು. ಆದರೆ, ಬಸ್‌ಗಳ ಓಡಾಡುವ ಪ್ರಯಾಣಿಕರ ಸಂಖ್ಯೆ ಎಂದಿಗಿಂತ ಕಡಿಮೆಯಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT