ಬೆಳಗಾವಿ/ಚಿಕ್ಕೋಡಿ: ಜಿಲ್ಲೆಯಲ್ಲಿ ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯಲಿರುವ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯನ್ನು ಸುಗಮವಾಗಿ ನಡೆಸುವ ಸಲುವಾಗಿ ಶಾಲಾ ಶಿಕ್ಷಣ ಇಲಾಖೆ ಎಲ್ಲ ತಯಾರಿ ಮಾಡಿಕೊಂಡಿದೆ. 235 ಕೇಂದ್ರಗಳಲ್ಲಿ 81,943 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 104 ಕೇಂದ್ರಗಳಿದ್ದು, 34,367 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 131 ಕೇಂದ್ರಗಳಿದ್ದು, 47,576 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

‘ಪರೀಕ್ಷೆಗಾಗಿ ಎಲ್ಲ ಕೇಂದ್ರ ಸಜ್ಜುಗೊಳಿಸಿದ್ದು, ವಿದ್ಯಾರ್ಥಿಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಿದ್ದೇವೆ. ಪೊಲೀಸರು ಭದ್ರತೆ ಒದಗಿಸಲಿದ್ದಾರೆ. ವಿದ್ಯಾರ್ಥಿಗಳು ತಮ್ಮೂರಿನಿಂದ ಪರೀಕ್ಷಾ ಕೇಂದ್ರದವರೆಗೆ ಸಾರಿಗೆ ಸಂಸ್ಥೆಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವಿದೆ’ ಎಂದು ಬೆಳಗಾವಿ ಡಿಡಿಪಿಐ ಲೀಲಾವತಿ ಹಿರೇಮಠ ‘ಪ್ರಜಾವಾಣಿ’ಗೆ ತಿಳಿಸಿದರು.

ವೆಬ್ಕಾಸ್ಟಿಂಗ್ ವ್ಯವಸ್ಥೆ:

‘ಪರೀಕ್ಷೆಗೆ 2,134 ಕೊಠಡಿ ಬಳಸಿಕೊಂಡಿದ್ದೇವೆ. ಪ್ರತಿ ಕೇಂದ್ರಕ್ಕೆ ತಲಾ ಒಬ್ಬ ಮುಖ್ಯ ಅಧೀಕ್ಷಕ, ಅಭಿರಕ್ಷಕ, ಮೊಬೈಲ್ ಸ್ವಾಧೀನ ಅಧಿಕಾರಿ ನಿಯೋಜಿಸಲಾಗಿದೆ. 131 ಸ್ಥಾನಿಕ ಜಾಗೃತ ದಳ, 65 ಉಪ ಅಧೀಕ್ಷಕರುನ್ನು ನೇಮಿಸಲಾಗಿದೆ. ಜಿಲ್ಲಾ ಹಂತದಲ್ಲಿ ನಾಲ್ಕು, ತಾಲ್ಲೂಕು ಹಂತದಲ್ಲಿ 24 ಸ್ಕ್ವಾಡ್ ತಂಡಗಳು ಇವೆ’ ಎಂದು ಚಿಕ್ಕೋಡಿ ಡಿಡಿಪಿಐ ಆರ್.ಎಸ್.ಸೀತಾರಾಮು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಚಿಕ್ಕೋಡಿ ಡಯಟ್ ಪ್ರಾಚಾರ್ಯ ಸಂಜು ಹುಲ್ಲೊಳ್ಳಿ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ನೋಡಲ್ ಅಧಿಕಾರಿ ಹರಿದಾಸ ಖಾಡೆ, ರಾಜು ದೇವಋಷಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.