ಮಂಗಳವಾರ, ಜುಲೈ 27, 2021
20 °C

ಎಸ್ಸೆಸ್ಸೆಲ್ಸಿ ಪರೀಕ್ಷೆ ಅತ್ಯಗತ್ಯ: ಪ್ರಭಾಕರ ಕೋರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರವು ಕೈಗೊಂಡ ಕ್ರಮವು ಸ್ವಾಗತಾರ್ಹವಾಗಿದೆ’ ಎಂದು ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು.

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಿತರಿಸಲೆಂದು ಸಂಸ್ಥೆಯಿಂದ 10ಸಾವಿರ ಮಾಸ್ಕ್‌ಗಳನ್ನು ಡಿಡಿಪಿಐ ಡಾ.ಆನಂದ ಬಿ. ಪುಂಡಲೀಕ ಅವರಿಗೆ ಮಂಗಳವಾರ ಹಸ್ತಾಂತರಿಸಿ ಅವರು ಮಾತನಾಡಿದರು.

‘ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆಯು ಈಗಾಗಲೇ ಎಲ್ಲ ರೀತಿಯ ಪೂರ್ವ ಸಿದ್ಧತೆ ಮಾಡಿಕೊಂಡಿದೆ. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಭಯ–ಆತಂಕ ತೊರೆದು ಎರಡು ದಿನಗಳ ಪರೀಕ್ಷೆಯನ್ನು ಎದುರಿಸಬೇಕು. ಓದಿನತ್ತ ಹೆಚ್ಚಿನ ಗಮನಹರಿಸಬೇಕು. ಅವರ ಆರೋಗ್ಯದ ಹಿತದೃಷ್ಟಿಯಿಂದ ಸಂಸ್ಥೆಯಿಂದ ಮಾಸ್ಕ್‌ಗಳನ್ನು ನೀಡಲಾಗಿದೆ’ ಎಂದರು.

ಸಂಸ್ಥೆಯ ಕಾರ್ಯದರ್ಶಿ ಡಾ.ಬಿ.ಜಿ. ದೇಸಾಯಿ, ಆಜೀವ ಸದಸ್ಯ ಮಹಾದೇವ ಬಳಿಗಾರ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು