ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ: ವಿದ್ಯಾರ್ಥಿನಿ ಅಸ್ವಸ್ಥ

Published 3 ಏಪ್ರಿಲ್ 2024, 4:52 IST
Last Updated 3 ಏಪ್ರಿಲ್ 2024, 4:52 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಅಂಜುಮನ್‌ ಇಂಗ್ಲಿಷ್‌ ಮಾಧ್ಯಮ ಪ್ರೌಢಶಾಲೆಯ ಕೇಂದ್ರದಲ್ಲಿ ಮಂಗಳವಾರ ನಡೆದ ಎಸ್ಸೆಸ್ಸೆಲ್ಸಿ ಗಣಿತ ವಿಷಯದ ಪರೀಕ್ಷೆಯಲ್ಲಿ ಅನಾರೋಗ್ಯದಿಂದ ಅಸ್ವಸ್ಥಗೊಂಡ ವಿದ್ಯಾರ್ಥಿನಿ ಪ್ರಜ್ಞೆ ತಪ್ಪಿದ ಘಟನೆ ನಡೆಯಿತು.

ಕೇಂದ್ರದ ಮುಖ್ಯ ಅಧೀಕ್ಷಕ ಎಸ್.ಎಸ್.ಹಾದಿಮನಿ ಮತ್ತಿತರರು ತಕ್ಷಣವೇ ಕರೆ ಮಾಡಿ, ಆಂಬುಲೆನ್ಸ್‌ ಕರೆಯಿಸಿದರು. ಅಸ್ವಸ್ಥಗೊಂಡ ವಿದ್ಯಾರ್ಥಿನಿಗೆ ತ್ವರಿತವಾಗಿ ಪ್ರಥಮ ಚಿಕಿತ್ಸೆ ಕೊಡಿಸಿದರು. ನಂತರ ಚೇತರಿಸಿಕೊಂಡ ವಿದ್ಯಾರ್ಥಿನಿ ಪರೀಕ್ಷೆ ಬರೆದಳು.

ಪರೀಕ್ಷಾ ಕೇಂದ್ರಕ್ಕೆ ಸಿಇಒ ಭೇಟಿ: ಬೆಳಗಾವಿಯ ಸೇಂಟ್ ಝೇವಿಯರ್ಸ್ ಪ್ರೌಢಶಾಲೆಯ ಪರೀಕ್ಷಾ ಕೇಂದ್ರಕ್ಕೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಿ.ಸಿ.ಟಿ.ವಿ ಕ್ಯಾಮೆರಾಗಳ ಕಾರ್ಯವೈಖರಿ ಪರಿಶೀಲಿಸಿದ ಅವರು, ‘ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಅನುಕೂಲ ಮಾಡಬೇಕು. ಪ್ರತಿ ಚಟುವಟಿಕೆ ಮೇಲೂ ನಿಗಾ ವಹಿಸಬೇಕು’ ಎಂದು ಸೂಚಿಸಿದರು. ಡಿಡಿಪಿಐ ಮೋಹನಕುಮಾರ ಹಂಚಾಟೆ, ನಗರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಎಸ್. ಹಿರೇಮಠ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT