ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಸತ್ತಿಗೇರಿಯ ಸಹನಾ ಕನ್ನಡದಲ್ಲಿ ಟಾಪರ್

Last Updated 19 ಮೇ 2022, 8:08 IST
ಅಕ್ಷರ ಗಾತ್ರ

ಬೆಳಗಾವಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಪ್ರಕಟವಾಗಿದ್ದು, ಜಿಲ್ಲೆಯ ಯರಗಟ್ಟಿ ತಾಲ್ಲೂಕಿನ ಸತ್ತಿಗೇರಿ ಕರ್ನಾಟಕ ಪಬ್ಲಿಕ್ ಶಾಲೆ ವಿದ್ಯಾರ್ಥಿನಿ ಸಹನಾ ಮಹಾಂತೇಶ ರಾಯರ, ಕನ್ನಡ ವಿಭಾಗದಲ್ಲಿ ಪೂರ್ಣ ಅಂಕ ಗಳಿಸಿ ರಾಜ್ಯಕ್ಕೆ ಟಾಪರ್‌ ಆಗಿ ಹೊರಹೊಮ್ಮಿದ್ದಾರೆ.

‘ಪ್ರಜಾವಾಣಿ‘ಯೊಂದಿಗೆ ಸಂತಸ ಹಂಚಿಕೊಂಡ ಅವರು, ‘ಕೋವಿಡ್‌–19 ಸಂಕಷ್ಟದಿಂದ ತರಗತಿ ಸಮರ್ಪಕವಾಗಿ ನಡೆಯಲಿಲ್ಲ. ಆನ್‌ಲೈನ್‌ ತರಗತಿಗೆ ಹಾಜರಾಗಲು ನೆಟ್‌ವರ್ಕ್‌ ಸಮಸ್ಯೆಯೂ ಕಾಡುತ್ತಲಿತ್ತು. ಆದರೂ, ಸಮಸ್ಯೆಗೆ ಎದೆಗುಂದದೆ ಆತ್ಮವಿಶ್ವಾಸದಿಂದ ಓದು ಮುಂದುವರಿಸಿದೆ. ಶಿಕ್ಷಕರು ಮತ್ತು ಹೆತ್ತವರು ಪ್ರೋತ್ಸಾಹಿಸಿದರು. ಹಾಗಾಗಿ ನಿರೀಕ್ಷೆಯಂತೆ ಸಾಧನೆ ಮಾಡಲು ಸಾಧ್ಯವಾಗಿದೆ’ ಎಂದರು.

‘9ನೇ ತರಗತಿ ವಾರ್ಷಿಕ ಪರೀಕ್ಷೆ ಮುಗಿಯುತ್ತಲೇ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ ಆರಂಭಿಸಿದೆ. ಶಿಕ್ಷಕರ ಪಾಠವನ್ನು ಏಕಾಗ್ರತೆಯಿಂದ ಆಲಿಸುತ್ತಿದ್ದೆ. ನಿತ್ಯ ಮನೆಗೆಲಸ ಮಾಡುತ್ತಲೇ 8 ತಾಸು ಓದುತ್ತಿದ್ದೆ. ಸತತ ಪರಿಶ್ರಮಕ್ಕೆ ಈಗ ಫಲ ಸಿಕ್ಕಿದೆ. 625 ಅಂಕ ಸಿಕ್ಕಿರುವುದು ಖುಷಿ ತಂದಿದೆ’ ಎಂದು ಸಂಭ್ರಮಿಸಿದರು.

‘ಮುಂದೆ ಪಿಯು ವಿಜ್ಞಾನ ವಿಭಾಗಕ್ಕೆ ಸೇರುತ್ತೇನೆ. ಭವಿಷ್ಯದಲ್ಲಿ ವೈದ್ಯೆಯಾಗಿ ಗ್ರಾಮೀಣ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ಆಸೆ ಇದೆ’ ಎಂದು ತಮ್ಮ ಕನಸು ಬಿಚ್ಚಿಟ್ಟರು.

1ರಿಂದ 10ನೇ ತರಗತಿ ಅವಧಿಯಲ್ಲಿ ಸಹನಾ 4 ಶಾಲೆ ಬದಲಿಸಿದ್ದಾರೆ. ಆದರೆ, ಸಾಧನೆಗೆ ಯಾವುದೂ ಅಡ್ಡಿಯಾಗಿಲ್ಲ. ಅವರ ತಂದೆ ಮಹಾಂತೇಶ ಕಿರಾಣಿ ಅಂಗಡಿ ಇಟ್ಟುಕೊಂಡಿದ್ದಾರೆ. ತಾಯಿ ಭಾರತಿ ಗೃಹಿಣಿ. ಹಿರಿಯ ಸಹೋದರ ಚೇತನ ಬಿ.ಕಾಂ. ವ್ಯಾಸಂಗ ಮಾಡುತ್ತಿದ್ದರೆ, ಕಿರಿಯ ಸಹೋದರಿ ಸಂಜನಾ 9ನೇ ತರಗತಿ ವಿದ್ಯಾರ್ಥಿನಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT