ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಬಜೆಟ್‌: ಕೃಷಿ ರಂಗಕ್ಕೆ ಶೇ 60ರಷ್ಟು ಹಣ ಮೀಸಲಿಡಲು ಒತ್ತಾಯ

Published 6 ಫೆಬ್ರುವರಿ 2024, 15:20 IST
Last Updated 6 ಫೆಬ್ರುವರಿ 2024, 15:20 IST
ಅಕ್ಷರ ಗಾತ್ರ

ಬೆಳಗಾವಿ: ‘ರಾಜ್ಯ ಸರ್ಕಾರವು ಮುಂದಿನ ಬಜೆಟ್‌ನಲ್ಲಿ ಕೃಷಿ ರಂಗಕ್ಕೆ ಶೇ 60ರಷ್ಟು ಹಣ ಮೀಸಲಿಡಬೇಕು’ ಎಂದು ಆಗ್ರಹಿಸಿ ಭಾರತೀಯ ಕೃಷಿಕ ಸಮಾಜದ(ಸಂಯುಕ್ತ ರೈತ ಸಂಘಟನೆ) ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ರೈತರ ಋಣ ಪರಿಹಾರ ಆಯೋಗ ರಚಿಸಬೇಕು. ಬರದಿಂದ ಕಂಗೆಟ್ಟಿರುವ ರೈತರು ಸಹಕಾರ ಬ್ಯಾಂಕ್‌ಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಪಡೆದಿರುವ ಸಾಲಮನ್ನಾ ಮಾಡಬೇಕು. ಬರದಿಂದ ತತ್ತರಿಸಿದ ರೈತರಿಗೆ ವೈಜ್ಞಾನಿಕವಾಗಿ ಬೆಳೆಹಾನಿ ಪರಿಹಾರ ಕೊಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮಂಡಿಸಿದರು.

ಸಿದಗೌಡ ಮೋದಗಿ, ಶಿವಲೀಲಾ ಮಿಸಾಳೆ, ಗೀತಾ ಧರೆಣ್ಣವರ, ಶಿವಬಸಪ್ಪ ದಿನ್ನಿಮನಿ, ತುಕಾರಾಮ ಉಪ್ಪಾರ, ಚನ್ನಪ್ಪ ಬೆಣ್ಣಿ, ಸಂಜು ಡೊಂಗರಗಾವಿ, ಮಲ್ಲಿಕಾರ್ಜುನ ಡೊಂಗರಗಾವಿ, ಪರಶುರಾಮ ಸಂಗನ್ನವರ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT