ಸವದತ್ತಿ: ತಾಲ್ಲೂಕಿನ ಹಂಚಿನಾಳ ಗ್ರಾಮದ ಶಾಂತಿನಿಕೇತನ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಹಾದಿಬಸಪ್ಪ ಯತ್ನಟ್ಟಿ ಅವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.
ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಈಚೆಗೆ ಜರುಗಿದ ಸಮಾರಂಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಆರೋಗ್ಯ ಸಚಿವ ದಿನೇಶ ಗುಂಡೂರಾವ್, ಪುಟ್ಟಣ್ಣಯ್ಯ, ಎನ್.ರಾಜಗೋಪಾಲ, ಬಿ. ಅಜಯ ಪ್ರಶಸ್ತಿ ಪ್ರದಾನ ಮಾಡಿದರು.