ಬುಧವಾರ, ಏಪ್ರಿಲ್ 1, 2020
19 °C

ಹಾಸ್ಟೆಲ್‌ ಮೇಲೆ ಕಲ್ಲು ತೂರಾಟ: ಐವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಇಲ್ಲಿನ ಸಂಗಮೇಶ್ವರ ನಗರದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್‌ ಮೆಟ್ರಿಕ್‌ ನಂತರ ವಿದ್ಯಾರ್ಥಿಗಳ ಹಾಸ್ಟೆಲ್‌ ಮೇಲೆ ಭಾನುವಾರ ರಾತ್ರಿ ಕಲ್ಲು ತೂರಾಟ ನಡೆಸಿದ್ದ ‍ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಎಪಿಎಂಸಿ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಸದಾಶಿವ ನಗರ ಗಣೇಶ ಚೌಕದ ಮದನ ಅಲಿಯಾಸ್ ಮೋಹಿತ ಹುಂದ್ರೆ (27), ಅಂಕುಶ ಹುಂದ್ರೆ (19), ಪ್ರಸಾದ ಜಾಂಬಳೆ (20), ಪ್ರಥಮೇಶ ವರ್ಪೆ (21) ಹಾಗೂ ಸದಾಶಿವನಗರ ಬೆಲ್ದಾರ ಚಾವಣಿಯ ಅಜಯ ಪವಾರ (22) ಬಂಧಿತರು. ಹಾಸ್ಟೆಲ್‌ನಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದ ದೃಶ್ಯಗಳನ್ನು ಆಧರಿಸಿ ಆರೋಪಿಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು