ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ| ಡಾ.ಬಿ.ಆರ್. ಅಂಬೇಡ್ಕರ್‌ ಬಾಲಕರ ಹಾಸ್ಟೆಲ್ ಮೇಲೆ ಕಲ್ಲುತೂರಾಟ: ಆತಂಕ

Last Updated 23 ಫೆಬ್ರುವರಿ 2020, 16:48 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಸಂಗಮೇಶ್ವರ ನಗರದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್‌ ಬಾಲಕರ ವಿದ್ಯಾರ್ಥಿನಿಲಯದ ಮೇಲೆ ಗುಂಪೊಂದು ಕಲ್ಲುತೂರಾಟ ನಡೆಸಿದ್ದರಿಂದ, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಹಾಸ್ಟೆಲ್‌ನ ಕಿಟಕಿಗಳ ಗಾಜು ಜಖಂ ಆಗಿದೆ. 20ಕ್ಕೂ ಹೆಚ್ಚು ಮಂದಿ ಅತಿಕ್ರಮವಾಗಿ ಹಾಸ್ಟೆಲ್‌ ಪ್ರವೇಶಿಸಿ ದಾಂದಲೆ ನಡೆಸಿದ್ದಾರೆ. ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ರಾಡ್, ಬ್ಯಾಟ್, ಕಟ್ಟಿಗೆ ತಂದಿದ್ದರು. ಆವರಣದಲ್ಲಿ ನಿಲ್ಲಿಸಿದ್ದ ಬೈಕ್ ಹಾಗೂ ಸೈಕಲ್ ಜಖಂಗೊಳಿಸಿದ್ದಾರೆ.

‘ಘಟನೆ ನಡೆದು ಬಹಳ ಸಮಯವಾದರೂ‌‌, ಹಿರಿಯ ಪೊಲೀಸ್ ಆಧಿಕಾರಿಗಳಾಗಲಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಾಗಲಿ ಸ್ಥಳಕ್ಕೆ ಬಂದಿಲ್ಲ. ನಾಲ್ವರು ಕಾನ್‌ಸ್ಟೆಬಲ್‌ಗಳನಷ್ಟೆ ನಿಯೋಜಿಸಲಾಗಿದೆ. ಕಿಡಿಗೇಡಿಗಳಿಂದ ನಡೆದಿರುವ ಈ ಕೃತ್ಯದಿಂದ ನಮಗೆ ಆತಂಕ ಉಂಟಾಗಿದೆ. ಅಪರಿಚಿತರು ಬಂದು ಏಕಾಏಕಿ ದಾಳಿ ನಡೆಸಿದ್ದಾರೆ’ ಎಂದು ವಿದ್ಯಾರ್ಥಿಗಳು ದಿಢೀರ್‌ ಪ್ರತಿಭಟನೆ ನಡೆಸಿದರು.

ಸ್ಥಳಕ್ಕೆ ಬಂದ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಉಮಾ ಸಾಲಿಗೌಡರ, ಎಪಿಎಂಸಿ ಠಾಣೆ ಇನ್‌ಸ್ಪೆಕ್ಟರ್‌ ಜಾವೇದ್ ಮುಶಾಪುರಿ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT