ಕೌಜಲಗಿ: ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೌಜಲಗಿ ಪಟ್ಟಣದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದರು.

ಪಟ್ಟಣದ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಈ ಭಾಗದ ವಿವಿಧ ಬೇಡಿಕೆಗಳ ಕುರಿತು ಮನವಿಗಳ ಮಹಾಪೂರವೇ ಹರಿದು ಬಂದಿತು.

ಸ್ಥಳೀಯ ಯುವಕ ಸಂಘ -ಸಂಸ್ಥೆಗಳ ವತಿಯಿಂದ ಕೌಜಲಗಿ ಪಟ್ಟಣಕ್ಕೆ ಹೆಚ್ಚಿನ ಸಾರಿಗೆ ಸೌಲಭ್ಯ ನೀಡುವುದು, ಸಾರಿಗೆ ಬಸ್ ನಿಲ್ದಾಣವನ್ನು ಇನ್ನಷ್ಟು ಅಭಿವೃದ್ಧಿ ಪಡಿಸುವುದು. ಕಾಯಂ ಸಾರಿಗೆ ನಿಯಂತ್ರಕ ಅಧಿಕಾರಿ ನೇಮಿಸುವುದು. ಸ್ಥಳೀಯ ಗ್ರಾಮ ಪಂಚಾಯಿತಿಯನ್ನು ಮೇಲ್ದರ್ಜೆಗೇರಿಸಿ, ಪುರಸಭೆಯನ್ನಾಗಿಸಬೇಕು. ಸಮುದಾಯ ಆರೋಗ್ಯ ಕೇಂದ್ರಕ್ಕೆ ಪೂರ್ಣ ಪ್ರಮಾಣದ ವೈದ್ಯರು, ಅಧಿಕಾರಿಗಳು ಸಿಬ್ಬಂದಿ ವರ್ಗ ನೇಮಿಸುವುದು. ಪಟ್ಟಣ ಹಾಗೂ ಸುತ್ತಮುತ್ತಲಿನ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಸರ್ಕಾರಿ ಪದವಿ ಕಾಲೇಜನ್ನು ಮಂಜೂರು ಮಾಡಿಸುವುದು, ಪಟ್ಟಣಕ್ಕೆ ಉಪ ನೊಂದನಾಧಿಕಾರಿ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಚೇರಿ ಸ್ಥಾಪಿಸಲು ಯುವಕರು ಒತ್ತಾಯಿಸಿದರು.

ಕೆಲವು ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಿದ ಶಾಸಕರು, ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಸಮಸ್ಯೆ ಬಗೆಹರಿಸಲು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-21-1009281005

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.