ಭಾನುವಾರ, ಜನವರಿ 16, 2022
28 °C

ಬೆಳಗಾವಿ: ಬೀದಿನಾಯಿಗಳ ದಾಳಿ: ನಾಲ್ವರು ಮಕ್ಕಳಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ನಗರದ ವಿವಿಧೆಡೆ ಬೀದಿನಾಯಿಗಳ ಹಾವಳಿ ಹೆಚ್ಚಿದ್ದು, ಶುಕ್ರವಾರ ಒಂದೇ ದಿನ ನಾಲ್ವರು ಮಕ್ಕಳಿಗೆ ಕಚ್ಚಿ ಗಾಯಗೊಳಿಸಿವೆ. ಇದರಿಂದ ಜನರು ಆತಂಕಗೊಂಡಿದ್ದಾರೆ.

ಹನುಮಾನ ನಗರ, ಜಯ ನಗರ, ವಿನಾಯಕ ನಗರ ಹಾಗೂ ಲಕ್ಷ್ಮೀ ಟೇಕಡಿ ಪ್ರದೇಶಗಳಲ್ಲಿ ನಾಯಿ ಕಚ್ಚಿರುವ ಬಗ್ಗೆ ವರದಿಯಾಗಿದೆ. ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

‘ನಗರದಲ್ಲಿ ಮಕ್ಕಳಿಗೆ ಬೀದಿನಾಯಿಗಳು ಕಚ್ಚುವ ಪ್ರಕರಣ ವರದಿಯಾಗುತ್ತಲೇ ಇವೆ. ಮಳೆಗಾಲದಲ್ಲಂತೂ ಪ್ರಕರಣ ಇನ್ನಷ್ಟು ಹೆಚ್ಚಿವೆ. ನಗರದ ಹೃದಯಭಾಗದ ಜೊತೆಗೆ, ಹೊರವಲಯದಲ್ಲೂ ಬೀದಿನಾಯಿಗಳ ಉಪಟಳವಿದೆ. ಇದಕ್ಕೆ ಕಡಿವಾಣ ಹಾಕಲು ಮಹಾನಗರ ಪಾಲಿಕೆ ತುರ್ತಾಗಿ ಕ್ರಮ ಕೈಗೊಳ್ಳಬೇಕು’ ಎಂದು ಕನ್ನಡ ಹೋರಾಟಗಾರ ಅಶೋಕ ಚಂದರಗಿ ಒತ್ತಾಯಿಸಿದ್ದಾರೆ.

‘ಮಕ್ಕಳಿಗೆ ಬೀದಿನಾಯಿ ಕಚ್ಚಿರುವ ಪ್ರಕರಣ ಗಂಭೀರವಾಗಿ ಪರಿಗಣಿಸಿದ್ದೇವೆ. ಅವುಗಳ ಹಾವಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗುವುದು. ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಲಾಗುವುದು’ ಎಂದು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ.ಸಂಜಯ ಡುಮ್ಮಗೋಳ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು