ಮೂಡಲಗಿ: ಎತ್ತಿನ ಬಂಡಿಯಲ್ಲಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಕರೆತರುವ ಮೂಲಕ ಶುಕ್ರವಾರ ಮೂಡಲಗಿ ಶೈಕ್ಷಣಿಕ ವಲಯದಲ್ಲಿ 2025–26ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಸಂಭ್ರಮದಿಂದ ಜರುಗಿತು.

ಅಲಂಕೃತ ಎತ್ತಿನ ಬಂಡಿಯಲ್ಲಿ ಪ್ರಸಕ್ತ ಶೈಕ್ಷಣಿಕ ಶಾಲೆಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳನ್ನು ಬಂಡಿಯಲ್ಲಿ ಕೂಢಿಸಿ ತಹಶೀಲ್ದಾರ್ ಶಿವಾನಂದ ಬಬಲಿ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಫ್.ಜಿ. ಚಿನ್ನನವರ ಬಂಡಿಯಲ್ಲಿ ಕುಳಿತು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಹೋಗಿ ಶಿಕ್ಷಣದ ಮಹತ್ವ, ಶಾಲಾ ಪ್ರಾರಂಭೋತ್ಸವ ಬಗ್ಗೆ ಫಲಕಗಳ ಪ್ರದರ್ಶನ ಮತ್ತು ಘೋಷಣೆಗಳನ್ನು ಕೂಗುತ್ತಾ ಜನರಲ್ಲಿ ಜಾಗೃತಿ ಮೂಡಿಸಿದರು.

ಶಾಲಾ ಸಭಾಭವನದಲ್ಲಿ ಜರುಗಿದ ಸಮಾರಂಭದಲ್ಲಿ ತಹಶೀಲ್ದಾರ್ ಶಿವಾನಂದ ಬಬಲಿ ಅವರು ಸರಸ್ವತಿ ದೇವಿಯ ಚಿತ್ರಕ್ಕೆ ಪೂಜೆ ಸಲ್ಲಿಸಿ, ದೀಪ ಬೆಳಗಿಸಿ ಮಾತನಾಡಿದರು.

‘ಸರ್ಕಾರಿ ಶಾಲೆಗಳಲ್ಲಿ ಸರ್ಕಾರದಿಂದ ಅನೇಕ ಸೌಲಭ್ಯಗಳಿವೆ. ಉತ್ತಮ ಶಾಲಾ ಕಟ್ಟಡ, ಪರಿಣಿತ ಶಿಕ್ಷಕ ವೃಂದವಿರುವುದರಿಂದ, ಉಚಿತ ಪುಸ್ತಕ, ಸಮವಸ್ತ್ರ, ಮಧ್ಯಾಹ್ನದ ಬಿಸಿಯೂಟದ ಸೌಲಭ್ಯಗಳಿದ್ದು ಜನರು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಸಿಡಿಪಿಒ ಯಲ್ಲಪ್ಪ ಗದಾಡಿ, ಪುರಸಭೆ ಮುಖ್ಯಾಧಿಕಾರಿ ತುಕಾರಾಮ ಮಾದರ ಮಾತನಾಡಿದರು.

ಶಾಲಾ ಮುಖ್ಯ ಶಿಕ್ಷಕ ಸುರೇಶ ಕೋಪರ್ಡೆ ಪ್ರಾಸ್ತಾವಿಕ ಮಾತನಾಡಿ ‘ಶತಮಾನ ಕಂಡಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಪೇವರ್ಸ್ ಅವಶ್ಯವಿದ್ದು ಅದನ್ನು ಪುರಸಭೆಯಿಂದ ಮಾಡಿಸಿಕೊಡಬೇಕು ಎಂದು ವಿನಂತಿಸಿಕೊಂಡರು.

ಉಚಿತ ಪಠ್ಯಪುಸ್ತಕ, ಸವವಸ್ತ್ರಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಫ್.ಜಿ. ಚಿನ್ನನವರ, ಪಿಎಸ್ಐ ಬಿ.ಎಚ್. ಕುಂಬಾರ, ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಬಿಚ್ಚು ಝಂಡೇಕುರಬರ, ಪುರಸಭೆ ಸದಸ್ಯರಾದ ಅಬ್ದುಲಗಫಾರ ಡಾಂಗೆ, ಮರೆಪ್ಪ ಮರೆಪ್ಪಗೋಳ, ಅನ್ವರ ನದಾಫ, ರಮೇಶ ಸಣ್ಣಕ್ಕಿ, ನನ್ನು ಶೇಖ, ಬಿಆರ್ಸಿ ರೇಣುಕಾ ಆನಿ, ಶಿಕ್ಷಣ ಸಂಯೋಜಕರಾದ ಸತೀಶ ಪಿ.ಎಸ್. ಆರ್.ವಿ. ಯರಗಟ್ಟಿ, ನಾಗಪ್ಪ ಗಡಾದಿ ಮತ್ತು ಶಿಕ್ಷಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.