ಬೈಹೊಂಗಲ: 'ಯುವಜನತೆ ತಮ್ಮ ಬದುಕಿನಲ್ಲಿ ಯಶಸ್ವಿಯಾಗಬೇಕಾದರೆ ವಿದ್ಯಾರ್ಥಿ ದೆಸೆಯಲ್ಲೇ ಉನ್ನತವಾದ ಗುರಿ ಮತ್ತು ಉತ್ತಮವಾದ ಕನಸುಗಳನ್ನು ಹೊಂದಿರಬೇಕು' ಎಂದು ಚಿಕ್ಕೋಪ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಮಹಾಂತೇಶ ಪಾಟೀಲ ಹೇಳಿದರು.

ಪಟ್ಟಣದ ಕೆಎಲ್ಇ ಪಿಯು ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮಂಗಳವಾರ ಏರ್ಪಡಿಸಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಹಾಗೂ ಕ್ರೀಡಾ ಮತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಕೆಎಲ್ಇ ಸಂಸ್ಥೆಯ ಉಪಾಧ್ಯಕ್ಷ ಬಿ.ಎಸ್.ತಟವಟಿ ಅಧ್ಯಕ್ಷತೆವಹಿಸಿ ಮಾತನಾಡಿ, 'ಜೀವನದಲ್ಲಿ ಸ್ವತಂತ್ರರಾಗಿ ಸಾಗುವಂತೆ ಮಾಡುವುದೇ ಶಿಕ್ಷಣ. ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಸಮಾಜಕ್ಕೆ ಪೂರಕವಾಗುವಂತೆ ವಿದ್ಯಾರ್ಜನೆ ಮಾಡಬೇಕು' ಎಂದರು.

ಬೂದಿಹಾಳ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಎನ್.ಆರ್.ಠಕ್ಕಾಯಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೆಎಲ್ಇ ಪಿಯು ಕಾಲೇಜಿನ ಪ್ರಾಚಾರ್ಯ ಎಸ್.ಬಿ.ತಟವಾಟಿ, ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯ ಎಸ್.ಬಿ.ನಿರಡಿ, ಬಿಸಿಎ ಪದವಿ ಕಾಲೇಜಿನ ಪ್ರಾಚಾರ್ಯ ವಿ.ಎಸ್.ಪಾಟೀಲ ಕ್ರೀಡಾ ವಿಭಾಗದ ಮುಖ್ಯಸ್ಥ ಎಸ್.ಐ.ಕುಳ್ಳೊಳ್ಳಿ ವೇದಿಕೆಯಲ್ಲಿದ್ದರು.

ಉಪನ್ಯಾಸಕ ಸಿ.ಆರ್.ಸಣ್ಣಾನಾಯ್ಕರ ಪರಿಚಯಿಸಿದರು. ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥ ವ್ಹಿ.ಬಿ.ಬಡಿಗೇರ ಸ್ವಾಗತಿಸಿದರು. ಉಪನ್ಯಾಸಕಿ ದೀಪ್ತಿ ಪಾಟೀಲ ನಿರೂಪಿಸಿದರು. ವಿದ್ಯಾ ಮುನವಳ್ಳಿ ವಂದಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಎಲ್ಲ ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು, ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.