ಗುರುವಾರ , ಜನವರಿ 21, 2021
16 °C

ಡಿಕೆಶಿಯದು ಮುಟ್ಠಾಳತನದ ಹೇಳಿಕೆ: ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಆತ್ಮಹತ್ಯೆಗೆ ಯತ್ನಿಸಿರುವುದಕ್ಕೆ ವಿಡಿಯೊವೊಂದು ಕಾರಣ ಎಂಬ ಕೆಪಿಸಿಸಿ ಅಧ್ಯಕ್ಷ ಡಿ‌.ಕೆ. ಶಿವಕುಮಾರ್ ಹೇಳಿಕೆ ಮುಟ್ಠಾಳತನದ್ದು’ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿರುಗೇಟು ನೀಡಿದರು. 

ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಜನರ ದಿಕ್ಕು ತಪ್ಪಿಸುವ ಹೇಳಿಕೆಯನ್ನು ಅವರು ನೀಡಿದ್ದಾರೆ. ಅಧಿಕಾರ ಕಳೆದುಕೊಂಡಿರುವ ಅವರು ಹತಾಶರಾಗಿದ್ದಾರೆ, ಹೀಗಾಗಿ, ದಿನಕ್ಕೊಂದು ಇಂತಹ ಹೇಳಿಕೆ ನೀಡುತ್ತಿದ್ದಾರೆ. ಏನೇ ಆರೋಪ ಮಾಡಿದರೂ ಅದಕ್ಕೆ  ದಾಖಲೆಗಳಿರಬೇಕು. ಅದ್ಯಾವುದೋ ವಿಡಿಯೊ ಇರುವುದು ಗೊತ್ತಾಗಿದ್ದರೆ ಮೊದಲೇ ಯಾಕೆ ಹೇಳಲಿಲ್ಲ? ಹೇಳಿದ್ದರೆ ಆತ ಆತ್ಮಹತ್ಯೆಗೆ ಯತ್ನಿಸುವುದನ್ನು ತಡೆಯಬಹುದಿತ್ತು. ಸಾಯಲಿ ಅಂತ ಕಾಯುತ್ತಿದ್ದರಾ?’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಕೆಟ್ಟ ರಾಜಕಾರಣ ಮಾಡಬಾರದು. ವಿಡಿಯೊ ಇದ್ದರೆ ಬಿಡುಗಡೆ ಮಾಡಲಿ ಅಥವಾ ಸಂತೋಷ್‌ಗೆ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ವಿಧಾನಪರಿಷತ್ ಸದಸ್ಯರು, ಸಚಿವರು ಯಾರು ಎನ್ನುವುದನ್ನು ಬಹಿರಂಗಪಡಿಸಲಿ’ ಎಂದು ಸವಾಲು ಹಾಕಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು