ರಾಮದುರ್ಗ: ಖಾನಪೇಠೆಯ ಶ್ರೀಧನಲಕ್ಷ್ಮಿ ಸಹಕಾರ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಗೆ ಭಾನುವಾರ ನಡೆದ ಚುನಾವಣೆಗೆ ಮತದಾನ ಮಾಡಲು ಸಾಲಿನಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಬಾದಾಮಿ ತಾಲ್ಲೂಕಿನ ಮನ್ನೇರಿ ಗ್ರಾಮದ ಬಸನಗೌಡ ಹನುಮಂತಗೌಡ ಅಯ್ಯನಗೌಡರ (65) ಮೃತಪಟ್ಟವರು.

ಪಟ್ಟಣದ ಈರಮ್ಮ ಯಾದವಾಡ ಪದವಿ ಕಾಲೇಜಿನಲ್ಲಿ ಮತದಾನದ ಕೇಂದ್ರಗಳನ್ನು ತೆರೆಯಲಾಗಿತ್ತು. ಮತದಾನ ಮಾಡಲು ಸಾಲಿನಲ್ಲಿ ನಿಂತಾಗ ಏಕಾಏಕಿ ಕುಸಿದು ಬಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ಚುನಾವಣೆ ಹಿನ್ನೆಲೆಯಲ್ಲಿ ರಾಮದುರ್ಗ–ಧಾರವಾಡ ರಾಜ್ಯ ಹೆದ್ದಾರಿಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಗಿತ್ತು.

ಒಟ್ಟು 19,436 ಮತದಾರರನ್ನು ಹೊಂದಿದ್ದ ಕಾರ್ಖಾನೆಯ ಚುನಾವಣೆಯಲ್ಲಿ ಒಟ್ಟು 12,056 ಮತದಾರರು ಮತದಾನ ಮಾಡಿದ್ದಾರೆ. ಒಟ್ಟು ಶೇ 62ರಷ್ಟು ಮತದಾನವಾಗಿದೆ.

ಒಟ್ಟು 50 ಮತದಾನದ ಕೇಂದ್ರಗಳನ್ನು ತೆರೆಯಲಾಗಿತ್ತು. 700 ಪೊಲೀಸ್ ಸಿಬ್ಬಂದಿ ಹಾಗೂ 250 ಚುನಾವಣೆ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.