ಶನಿವಾರ, ಅಕ್ಟೋಬರ್ 23, 2021
24 °C

ಬೆಳಗಾವಿ: ಸಕ್ಕರೆ ಸಚಿವರ ಪ್ರವಾಸ ಸೆ.28ರಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಕೈಮಗ್ಗ ಮತ್ತು ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಂಕರ ಬ.ಪಾಟೀಲ ಮುನೇನಕೊಪ್ಪ ಸೆ.28ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಅಂದು ಬೆಳಿಗ್ಗೆ 11ಕ್ಕೆ ಇಲ್ಲಿನ ಸುವರ್ಣ ವಿದಾನಸೌಧದಲ್ಲಿ, ರಾಜ್ಯದಲ್ಲಿರುವ ಸಕ್ಕರೆ ಉದ್ದಿಮೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರ ವೇತನವನ್ನು ಪರಿಷ್ಕರಿಸಲು ತ್ರಿಪಕ್ಷೀಯ ವೇತನ ಸಮಿತಿ ಸಭೆ ನಡೆಸುವರು. ಮಧ್ಯಾಹ್ನ 1ಕ್ಕೆ ಗಣೇಶಪುರದಲ್ಲಿರುವ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆಗೆ ಭೇಟಿ ನೀಡಿ ಪರಿಶೀಲಿಸುವರು. ಮಧ್ಯಾಹ್ನ 3ಕ್ಕೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಬಳಿಕ ಜವಳಿ ಘಟಕಗಳಿಗೆ ಭೇಟಿ ನೀಡುವರು. ರಾತ್ರಿ 8ಕ್ಕೆ ಹುಬ್ಬಳ್ಳಿಗೆ ನಿರ್ಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು