ನಿಪ್ಪಾಣಿ: ‘ಮುಚ್ಚುವ ಹಂತದಲ್ಲಿದ್ದ ಕಾರ್ಖಾನೆ ಕೆಲವೇ ವರ್ಷಗಳಲ್ಲಿ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಇದಕ್ಕೆಲ್ಲ ಕಾರ್ಖಾನೆಯ ಸಿಬ್ಬಂದಿಯ ಪ್ರಾಮಾಣಿಕ ಮತ್ತು ಕಠಿಣ ಪರಿಶ್ರಮವೇ ಕಾರಣ. ಅವರೇ ನಮ್ಮ ಶಕ್ತಿ, ದಸರಾ ಮತ್ತು ದೀಪಾವಳಿ ಹಬ್ಬಕ್ಕಾಗಿ ಒಂದು ತಿಂಗಳಿನ ಬೋನಸ್ ನೀಡಲು ಆಡಳಿತ ಮಂಡಳಿ ತಿರ್ಮಾನಿಸಿದೆ. ಕಳೆದ 25 ವರ್ಷದಲ್ಲಿ ಇದು ಗರಿಷ್ಠ ಬೋನಸ್ ಆಗಿದೆ’ ಎಂದು ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.

ನಗರದ ಹೊರವಲಯದಲ್ಲಿರುವ ಶ್ರೀ ಹಾಲಸಿದ್ಧನಾಥ ಸಹಕಾರ ಸಕ್ಕರೆ ಕಾರ್ಖಾನೆಯ 2025-26ನೇ ಸಾಲಿನ ಹಬೆಜನಕದ ಅಗ್ನಿಪ್ರದಿಪನ ನೆರವೇರಿಸಿ ಭಾನುವಾರ ಮಾತನಾಡಿದರು.

‘ಈ ಹಂಗಾಮಿನಲ್ಲಿ ಕಾರ್ಖಾನೆಯನ್ನು 120ರಿಂದ 150 ದಿನಗಳವರೆಗೆ ನಡೆಸುವ ಯೋಜನೆಯ ರೂಪಿಸಲಾಗಿದೆ. ಜೊತೆಗೆ ಪ್ರತಿದಿನ 11 ಸಾವಿರ ಟನ್ ಕಬ್ಬು ನುರಿಸಿ 10 ಲಕ್ಷ ಸಕ್ಕರೆ ಚೀಲಗಳನ್ನು ಉತ್ಪಾದಿಸುವ ಗುರಿ ಹೊಂದಲಾಗಿದೆ’ ಎಂದರು.

ಶಾಸಕಿ ಶಶಿಕಲಾ ಜೊಲ್ಲೆ ಮಾತನಾಡಿ, ‘ಕಾರ್ಖಾನೆ ಹಂತ ಹಂತವಾಗಿ ಬೆಳೆದು ನಿಂತಿದೆ. ಸಹಕಾರ ವಲಯದಲ್ಲಿ ರಾಜ್ಯದ ನಂಬರ್ 1 ಕಾರ್ಖಾನೆಯಾಗಿ ಮಾಡುವುದು ನಮ್ಮ ಗುರಿ. ಕಾರ್ಖಾನೆಗೆ ಹೆಚ್ಚಿನ ಕಬ್ಬು ಕಳುಹಿಸಿ ಬರುವ ಹಂಗಾಮು ಯಶಸ್ವಿಗೊಳಿಸಿ’ ಎಂದರು.

ಸಾನ್ನಿಧ್ಯ ವಹಿಸಿದ್ದ ನಿಡಸೋಸಿಯ ಸಿದ್ಧಸಂಸ್ಥಾನಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಮಾತನಾಡಿ, ‘ಕಾರ್ಖಾನೆಯು ಅಮೂಲಾಗ್ರ ಸುಧಾರಣೆಗಳೊಂದಿಗೆ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಎಥೆನಾಲ್ ಘಟಕದ ಜತೆಗೆ ಕಾರ್ಖಾನೆಯು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ’ ಎಂದು ಹರ್ಷ ವ್ಯಕ್ತಪಡಿಸಿದರು.

ಬೋನಸ್ ಘೋಷನೆಯಾಗುತ್ತಿದ್ದಂತೆ ಸಿಬ್ಬಂದಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಕಾರ್ಖಾನೆಯ ಅಧ್ಯಕ್ಷ ಮಲಗೊಂಡಾ ಪಾಟೀಲ, ಉಪಾಧ್ಯಕ್ಷ ಪವನಕುಮಾರ ಪಾಟೀಲ, ನಿರ್ದೇಶಕರಾದ ಅಪ್ಪಾಸಾಹೇಬ ಜೊಲ್ಲೆ, ವಿಶ್ವನಾಥ ಕಮತೆ, ಅವಿನಾಶ ಪಾಟೀಲ, ರಾಮಗೊಂಡಾ ಪಾಟೀಲ, ಸುಕುಮಾರ ಪಾಟೀಲ, ಸಮಿತ ಸಾಸನೆ, ಜಯಕುಮಾರ ಖೋತ, ಪ್ರಕಾಶ ಶಿಂಧೆ, ರಮೇಶ ಪಾಟೀಲ, ರಾವಸಾಹೇಬ ಫರಾಳೆ, ಶರದ ಜಂಗಟೆ, ಸುಹಾಸ ಗೂಗೆ, ಗೀತಾ ಪಾಟೀಲ, ವೈಶಾಲಿ ನಿಕಾಡೆ, ರಾಜು ಗುಂಡೇಶಾ, ಮಹಾಲಿಂಗ ಕೋಠಿವಾಲೆ, ಮಿಥುನ ಪಾಟೀಲ, ಸರ್ಜೇರಾವ ಪಾಟೀಲ, ವ್ಯವಸ್ಥಾಪಕ ನಿರ್ದೇಶಕ ಅಪ್ಪಾಸಾಹೇಬ ಶಿರಗಾವೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.