ಮಂಗಳವಾರ, ನವೆಂಬರ್ 24, 2020
23 °C

ಹರ್ಷ ಶುಗರ್ಸ್ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಸವದತ್ತಿ ತಾಲ್ಲೂಕಿನ ಹರ್ಷ ಶುಗರ್ಸ್‌ ಕಾರ್ಖಾನೆಯಲ್ಲಿ 2020 -21ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಶುಕ್ರವಾರ ಚಾಲನೆ ನೀಡಲಾಯಿತು.

ಸಂಬಯ್ಯನ ಮಠದ ಉಮೇಶ್ವರ ಸ್ವಾಮೀಜಿ (ಹೂಲಿ ಅಜ್ಜ) ಪೂಜೆ ನೆರವೇರಿಸಿ ಚಾಲನೆ ನೀಡಿದರು.

ವ್ಯವಸ್ಥಾಪಕ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ‘ಕಾರ್ಖಾನೆಗೆ 2018-19ನೇ ಸಾಲಿನಿಂದ ನೀಡುತ್ತಿರುವ ಸಹಕಾರವನ್ನು ರೈತರ ಪ್ರಸಕ್ತ ಸಾಲಿನಲ್ಲೂ ಕೊಡಬೇಕು. ಕಬ್ಬು ಬೆಳೆಗಾರರಿಗೆ ಯೋಗ್ಯ ದರ ನೀಡುವಲ್ಲಿ ಕಾರ್ಖಾನೆ ಹಿಂದೆ ಮುಂದೆ ನೋಡುವುದಿಲ್ಲ’ ಎಂದರು.

ಕಳೆದ ಸಾಲಿನಲ್ಲಿ ಹೆಚ್ಚು ಕಬ್ಬು ಪೂರೈಸಿದ 6 ರೈತರನ್ನು ಸನ್ಮಾನಿಸಲಾಯಿತು. ನಿರ್ದೇಶಕ ಮೃಣಾಲ ಹೆಬ್ಬಾಳಕರ ಇದ್ದರು.

‘ಕಳೆದ ಸಾಲಿನಲ್ಲಿ ಕಬ್ಬು ಪೂರೈಸಿದ ರೈತರಿಗೆ ₹ 100 ಹೆಚ್ಚುವರಿಯಾಗಿ ನೀಡಲಾಗುವುದು. ಇದರಿಂದಾಗಿ ಎಫ್ಆರ್‌ಪಿಗಿಂತ ₹ 172 ಹೆಚ್ಚುವರಿಯಾಗಿ ನೀಡಿದಂತಾಗಿದೆ. ಪ್ರಸ್ತುತ ಹಂಗಾಮಿಗೂ ರೈತರಿಗೆ ಯೋಗ್ಯವಾದ ದರ ನೀಡಲಾಗುವುದು’ ಎಂದು ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು