ನಿಪ್ಪಾಣಿ: ‘ಪ್ರಸಕ್ತ ಹಂಗಾಮಿನಲ್ಲಿ 10 ಲಕ್ಷ ಕಬ್ಬು ನುರಿಸುವ ಗುರಿ ಹೊಂದಲಾಗಿದೆ. ಕಾರ್ಖಾನೆಯ ಮಾರ್ಗದರ್ಶಕ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮತ್ತು ಶಾಸಕಿ ಶಶಿಕಲಾ ಜೊಲ್ಲೆಯವರ ಮಾರ್ಗದರ್ಶನದಲ್ಲಿ ವಿಸ್ತರಣೆಯ ಕಾರ್ಯ ಭರದಿಂದ ಸಾಗಿದ್ದು, ಪ್ರತಿ ದಿನ 11 ಸಾವಿರ ಟಿಸಿಡಿಯಂತೆ ಕಬ್ಬು ನುರಿಸಲು ಕಾರ್ಖಾನೆ ಸಿದ್ಧಗೊಳ್ಳುತ್ತಿದೆ’ ಎಂದು ಸ್ಥಳೀಯ ಹಾಲಸಿದ್ಧನಾಥ ಸಹಕಾರ ಸಕ್ಕರೆ ಕಾರ್ಖಾನೆ(ಬಹುರಾಜ್ಯ) ಅಧ್ಯಕ್ಷ ಮಲಗೊಂಡಾ ಪಾಟೀಲ ಹೇಳಿದರು.

ಕಾರ್ಖಾನೆಯ 39ನೇ ಕಬ್ಬು ನುರಿಸುವ ಹಂಗಾಮಿಗೆ ಬುಧವಾರ ಚಾಲನೆ ನೀಡಿ ಮಾತನಾಡಿದ ಅವರು, ‘ಕಾರ್ಖಾನೆಯ 8500 ಸಾವಿರ ಮೆಟ್ರಿಕ್ ಟನ್ ಕಬ್ಬು ಅರೆಯುವ ಸಾಮರ್ಥ್ಯವನ್ನು 11 ಸಾವಿರಕ್ಕೆ ಹೆಚ್ಚಿಸಲಾಗಿದೆ’ ಎಂದರು.

ಸ್ಥಳೀಯ ವಿರುಪಾಕ್ಷಲಿಂಗ ಸಮಾಧಿಮಠದ ಪ್ರಾಣಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರ ಜನ್ಮದಿನದ ಅಂಗವಾಗಿ ಕಾರ್ಮಿಕರಿಗೆ ಆರೋಗ್ಯ ಉಚಿತ ತಪಾಸಣೆ ಶಿಬಿರ, ರಕ್ತದಾನ ಶಿಬಿರ ಮತ್ತು ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ ಕಾರ್ಯಕ್ರಮ ಜರುಗಿದವು.

ಆಶಾಜ್ಯೋತಿ ವಿಶೇಷ ಮಕ್ಕಳ ವಸತಿ ಶಾಲೆಯ ಅಧ್ಯಕ್ಷ ಜ್ಯೋತಿಪ್ರಸಾದ ಜೊಲ್ಲೆ, ಕಾರ್ಖಾನೆಯ ಉಪಾಧ್ಯಕ್ಷ ಪವನ ಪಾಟೀಲ, ಸಂಚಾಲಕರಾದ ವಿಶ್ವನಾಥ ಕಮತೆ, ಅವಿನಾಶ ಪಾಟೀಲ, ರಾಮಗೊಂಡಾ ಪಾಟೀಲ, ಸುಕುಮಾರ ಪಾಟೀಲ, ಸಮಿತ ಸಾಸನೆ, ಜಯಕುಮಾರ ಖೋತ, ಜಯವಂತ ಭಾಟಲೆ, ರಮೇಶ ಪಾಟೀಲ, ರಾವಸಾಹೇಬ ಫರಾಳೆ, ಶರದ ಜಂಗಟೆ, ವಿನಾಯಕ ಪಾಟೀಲ, ಶ್ರೀಕಾಂತ ಬನ್ನೆ, ಸುಹಾಸ ಗೂಗೆ, ಮಹಾಲಿಂಗ ಕೋಠಿವಾಲೆ, ಸರ್ಜೇರಾವ ಪಾಟೀಲ, ಸುನೀಲ ಪಾಟೀಲ, ವ್ಯವಸ್ಥಾಪಕ ನಿರ್ದೇಶಕ ಅಪ್ಪಾಸಾಹೇಬ ಶಿರಗಾವೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.