ಬೈಲಹೊಂಗಲ: ರೈತ ಬೆಳೆದ ಪ್ರತಿ ಟನ್ ಕಬ್ಬಿಗೆ ಕಾರ್ಖಾನೆಗಳು ₹3,500 ದರ ನಿಗದಿಪಡಿಸಬೇಕೆಂದು ಒತ್ತಾಯಿಸಿ ವಿವಿಧ ರೈತ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಕಬ್ಬು ಬೆಳೆಗಾರರು ಆಹೋರಾತ್ರಿ ಧರಣಿ ಆರಂಭಿಸಿ ರಸ್ತೆ ತಡೆದು ಸೋಮವಾರ ಪ್ರತಿಭಟನೆ ನಡೆಸಿದರು. ಸರ್ಕಾರ ಹಾಗೂ ಜಿಲ್ಲಾಡಳಿತದ ನಡೆ ಖಂಡಿಸಿ ಧಿಕ್ಕಾರ ಕೂಗಿದರು.

ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಹೋರಾಟ ಸ್ಥಳಕ್ಕೆ ಭೇಟಿ ನೀಡಿ, ಪ್ರತಿ ಟನ್ ಕಬ್ಬಿಗೆ ₹3,500 ದರವನ್ನು ರಾಜ್ಯ ಸರ್ಕಾರ ನಿಗದಿ ಮಾಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು’ ಎಂದು ತಿಳಿಸಿದರು.

ನೇಗಿಲ ಯೋಗಿ ರೈತ ಸಂಘ ರಾಜ್ಯಾಧ್ಯಕ್ಷ ರವಿ ಪಾಟೀಲ, ಜಿಲ್ಲಾಧ್ಯಕ್ಷ ಶಂಕರ ಬೋಳಣ್ಣವರ ಮಾತನಾಡಿ, ‘ಜಿಲ್ಲೆಯಲ್ಲಿ 28 ಸಕ್ಕರೆ ಕಾರ್ಖಾನೆಗಳಿದ್ದು, ಇದುವರೆಗೆ ಯಾವುದೇ ರೈತರ ಬೇಡಿಕೆಯಂತೆ ದರ ಘೋಷಣೆ ಮಾಡಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ, ರೈತ ಸಂಘಟನೆಗಳ ಮುಖಂಡರಾದ ಬೀರಪ್ಪ ದೇಶನೂರ, ಬಸವರಾಜ ಮೊಕಾಶಿ, ಶಿವಾನಂದ ಸರದಾರ, ಸುರೇಶ ಸಂಪಗಾಂವ, ಮಲ್ಲಿಕಾರ್ಜುನ ಹುಂಬಿ, ಮಹಾಂತೇಶ ಕಮತ, ಬಸನಗೌಡ ಪಾಟೀಲ, ಸೋಮಲಿಂಗಪ್ಪ ಮೆಳ್ಳಿಕೇರಿ ಮಾತನಾಡಿದರು.

ಮುಖಂಡರಾದ ಸುಭಾಸ ಬಾಗೇವಾಡಿ, ದಾನಪ್ಪಗೌಡ ಕುಸಲಾಪೂರ, ಸುರೇಶ ಯರಗಟ್ಟಿ, ಶಂಕ್ರೆಯ್ಯ ಕುಲಕರ್ಣಿ, ಗುರುಸಿದ್ದಪ್ಪ ಕೋಟಗಿ, ರಾಜು ನರಸಣ್ಣವರ, ಬಸ್ಸು ಉಪ್ಪಾರ, ಬಸವರಾಜ ಜಂಬಗಿ, ಮಲ್ಲಪ್ಪ ಏಣಗಿ ಹಾಗೂ ನೇಗಿಲ ಯೋಗಿ ರೈತ ಸಂಘ, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ, ಕಬ್ಬು ಬೆಳೆಗಾರರ ಸಂಘ, ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘದ ಒಕ್ಕೂಟ, ಇತರ ಸಂಘಟನೆಗಳ ರೈತರು ಪಾಲ್ಗೊಂಡಿದ್ದರು.

ಬೆಂಬಲ: ಶಾಸಕ ಮಹಾಂತೇಶ ಕೌಜಲಗಿ, ಕಿತ್ತೂರ ಶಾಸಕ ಬಾಬಾಸಾಹೇಬ ಪಾಟೀಲ, ಮಾಜಿ ಶಾಸಕ ಮಹಾಂತೇಶ ದೊಡಗೌಡರ, ಚಿತ್ರನಟ ಶಿವರಂಜನ್ ಬೋಳಣ್ಣವರ, ಮಾಜಿ ಸಚಿವ ಶಶಿಕಾಂತ ನಾಯಕ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಂ.ಆರ್.ಮೆಳವಂಕಿ, ಇತರರು ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.