ಸೋಮವಾರ, ಸೆಪ್ಟೆಂಬರ್ 20, 2021
21 °C

ಪಠ್ಯದೊಂದಿಗೆ ಕ್ರೀಡೆಗೂ ಆದ್ಯತೆ ನೀಡಿ: ಸಂಜಯ ಪೂಜಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ವಿದ್ಯಾರ್ಥಿಗಳು ದೈಹಿಕ ಸದೃಢತೆ ಕಾಪಾಡಿಕೊಳ್ಳಲು ಪಠ್ಯದ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು. ಇದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸಿಕೊಳ್ಳಬಹುದು’ ಎಂದು ಪ್ರಾಚಾರ್ಯ ಸಂಜಯ ಪೂಜಾರಿ ಹೇಳಿದರು.

ಇಲ್ಲಿನ ಅಂಗಡಿ ತಾಂತ್ರಿಕ ಮತ್ತು ವ್ಯವಸ್ಥಾಪನಾ ಕಾಲೇಜಿನಲ್ಲಿ ಶನಿವಾರ ನಡೆದ ಜಿಮ್‌ಖಾನಾ ಪಾರಿತೋಷಕ ವಿತರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಜಿಮಖಾನಾ ಅಧ್ಯಕ್ಷ ಪ್ರೊ.ಕಿರಣ ಪೋತದಾರ 2018–19ನೇ ಸಾಲಿನ ವರದಿ ಮಂಡಿಸಿದರು. ವಿದ್ಯಾರ್ಥಿ, ವಿದ್ಯಾರ್ಥಿನಿಯರು ಅಂತರ ಕಾಲೇಜು ಹಾಗೂ ವಿಟಿಯು ಮಟ್ಟದ ಕ್ರೀಡಾ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಉತ್ತಮ ಸಾಧನೆ ಮಾಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕ್ರೀಡೆ ಮತ್ತು ಶೈಕ್ಷಣಿಕ ವಿಭಾಗಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪದಕ ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಅಥ್ಲೆಟಿಕ್ಸ್‌ನಲ್ಲಿ ಉತ್ತಮ ಸಾಧನೆಗಾಗಿ ಮೆಕ್ಯಾನಿಕಲ್ ಎಂಜಿನಿಯರಿಂಗ್‌ ವಿಭಾಗದ ವಿದ್ಯಾರ್ಥಿಗಳಾದ ಗುರುನಾಥ ಕೋಲಾದೂರ, ಮಂಥನ್ ರೇವಣಕರಗೆ ‘ವರ್ಷದ ಅತ್ಯುತ್ತಮ ಕ್ರೀಡಾಪಟು’ಗಳೆಂದು ಗೌರವಿಸಲಾಯಿತು. ಪುರುಷರ ಮತ್ತು ಮಹಿಳೆಯರ ವಿಭಾಗದ ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ಕಂಪ್ಯೂಟರ್ ಸೈನ್ಸ್‌ ವಿಭಾಗದವರು ಪಡೆದುಕೊಂಡರು.

ಪ್ರೊ.ಅಮರ್ ಬ್ಯಾಕೋಡಿ, ಪ್ರೊ.ಅನಿಲ್‌ಕುಮಾರ್ ಕೋರಿಶೆಟ್ಟಿ, ಪ್ರೊ.ಸಾಗರ ಬಿರ್ಜೆ, ದೈಹಿಕ ಶಿಕ್ಷಣ ನಿರ್ದೇಶಕ ವಿಶಾಂತ ಧಮೋಣೆ ಇದ್ದರು.

ಅತಿಖಾ ಬೇಗ್ ನಿರೂಪಿಸಿದರು. ದಿವ್ಯಾನಿ ಶೇಲಾರ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು