ಖಾದಿ ಬಟ್ಟೆ ಬಳಸಲು ಸಲಹೆ

7

ಖಾದಿ ಬಟ್ಟೆ ಬಳಸಲು ಸಲಹೆ

Published:
Updated:

ಬೆಳಗಾವಿ: ಪ್ರತಿಯೊಬ್ಬರೂ ಖಾದಿ ಬಟ್ಟೆಗಳನ್ನು ಬಳಕೆ ಮಾಡಬೇಕು. ಇದರಿಂದ ಖಾದಿ ಉದ್ಯಮಕ್ಕೆ ನೆರವಾದಂತೆ ಆಗುತ್ತದೆ. ಜೊತೆಗೆ ನಿರುದ್ಯೋಗ ಸಮಸ್ಯೆಯೂ ಕಡಿಮೆಯಾಗುತ್ತದೆ ಎಂದು ನಾಗನೂರ ರುದ್ರಾಕ್ಷಿಮಠದ ಸಿದ್ಧರಾಮ ಸ್ವಾಮೀಜಿ ಹೇಳಿದರು.

ಇಲ್ಲಿನ ಕಿರ್ಲೋಸ್ಕರ್ ರಸ್ತೆಯಲ್ಲಿ ನಿರ್ಮಿಸಿದ ಖಾದಿ ಗ್ರಾಮೋದ್ಯೋಗ ಭವನ ಹಾಗೂ ಗಾಂಧಿ ಜಯಂತಿ ಅಂಗವಾಗಿ ಆಯೋಜಿಸಿದ್ದ ವಸ್ತುಪ್ರದರ್ಶನವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.

‘ಗಾಂಧೀಜಿ ಅವರು ಗ್ರಾಮಗಳ ಅಭಿವೃದ್ಧಿ ಬಗ್ಗೆ ಕಳಕಳಿ ಹೊಂದಿದ್ದರು. ಗ್ರಾಮಗಳಲ್ಲೇ ಉದ್ಯೋಗ ಕೈಗೊಳ್ಳುವಂತೆ ನಾಗರಿಕರಿಗೆ ಕರೆ ನೀಡಿದ್ದರು. ಅವರ ಸ್ವಚ್ಛ ಭಾರತದ ಕಲ್ಪನೆಯನ್ನು ಸಾಕಾರಗೊಳಿಸಲು ನಾವೆಲ್ಲರೂ ಮುಂದಾಗಬೇಕು. ಸ್ವದೇಶಿ ವಸ್ತುಗಳ ಬಳಕೆಗೆ ಆದ್ಯತೆ ನೀಡಬೇಕು’ ಎಂದು ತಿಳಿಸಿದರು.

ಸಂಸದ ಸುರೇಶ ಅಂಗಡಿ ಮಾತನಾಡಿದರು. ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಉಪನಿರ್ದೇಶಕ ಶ್ರೀಕಾಂತ ಮಾಸೂರ, ಖಾದಿ ಮತ್ತು ಗ್ರಾಮೋದ್ಯೋಗ ಸಹಕಾರಿ ಉತ್ಪಾದಕರ ಸಂಘದ ಕಾರ್ಯದರ್ಶಿ ವಿ.ಎ. ಬಲಕುಂದಿ, ನಿರ್ದೇಶಕ ಮಂಡಳಿ ಸದಸ್ಯರು, ಸಿಬ್ಬಂದಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !