ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಸ್ಥಾನಕ್ಕಾಗಿ ಜೆಡಿಎಸ್‌ನಲ್ಲಿ ಪೈಪೋಟಿ

Last Updated 22 ಮೇ 2018, 19:40 IST
ಅಕ್ಷರ ಗಾತ್ರ

ಬೆಂಗಳೂರು: ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಸಂಪುಟದಲ್ಲಿ ಸಚಿವ ಸ್ಥಾನ ಗಿಟ್ಟಿಸಲು ಜೆಡಿಎಸ್‌ನಲ್ಲಿ ಭಾರೀ ಪೈಪೋಟಿ ಏರ್ಪಟ್ಟಿದೆ.

ಸಂಪುಟಕ್ಕೆ ಸೇರ್ಪಡೆ ಆಗುವವರ ಪಟ್ಟಿಯಲ್ಲಿ ಎಚ್‌.ಡಿ.ರೇವಣ್ಣ, ಜಿ.ಟಿ.ದೇವೇಗೌಡ, ಎಚ್‌.ವಿಶ್ವನಾಥ್‌, ಬಂಡೆಪ್ಪ ಕಾಶೆಂಪೂರ, ಬಿ.ಎಂ.ಫಾರೂಕ್, ಸಿ.ಎಸ್‌.ಪುಟ್ಟರಾಜು, ಎ.ಟಿ.ರಾಮಸ್ವಾಮಿ, ಡಾ. ಕೆ.ಅನ್ನದಾನಿ, ಡಿ.ಸಿ.ತಮ್ಮಣ್ಣ, ಬಿಎಸ್‌ಪಿಯ ಮಹೇಶ್‌ ಅವರ ಹೆಸರುಗಳು ಕೇಳಿ ಬಂದಿವೆ. ಕುಮಾರಸ್ವಾಮಿ ಪ್ರಮಾಣ ವಚನದ ಬಳಿಕ ದೇವೇಗೌಡ ಮತ್ತು ಕುಮಾರಸ್ವಾಮಿ ಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಲ್ಲದೆ, ಕೆ.ಆರ್‌.ನಗರ ಶಾಸಕ ಸಾ.ರಾ.ಮಹೇಶ್‌, ಅರಸೀಕೆರೆ ಶಾಸಕ ಶಿವಲಿಂಗೇಗೌಡ, ವಿಧಾನ ಪರಿಷತ್‌ ಸದಸ್ಯ ಟಿ.ಎ.ಶರವಣ, ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ ಮಂತ್ರಿ ಸ್ಥಾನದ ಆಕಾಂಕ್ಷಿಗಳು.

ಶರವಣ ಲಾಬಿ: ಆರ್ಯವೈಶ್ಯ ಸಮಾಜದ ಪ್ರಮುಖರು ದೇವೇಗೌಡರನ್ನು ಭೇಟಿ ಮಾಡಿ, ಶರವಣ ಅವರಿಗೆ ಮಂತ್ರಿಮಂಡಲದಲ್ಲಿ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಶರವಣ ಅವರು ದೇವೇಗೌಡ ಮತ್ತು ಕುಮಾರಸ್ವಾಮಿ ಆಪ್ತ ವಲಯದಲ್ಲಿ ಕಾಣಿಸಿಕೊಂಡಿರುವುದರಿಂದ ಅವರಿಗೆ ಸಚಿವ ಸ್ಥಾನದ ಆಸೆ ಚಿಗುರಿದೆ ಎಂದು ಮೂಲಗಳು ಹೇಳಿವೆ.

ದೇವೇಗೌಡರಲ್ಲಿ ಪ್ರಸ್ತಾಪ ಮಾಡಿದ್ದೇನೆ, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶರವಣಗೆ ತಿಳಿಸಿದರು.

ಪಕ್ಷೇತರರಾಗಿ ಗೆದ್ದಿರುವ ಆರ್‌.ಶಂಕರ್‌ ಮತ್ತು ಕೆ.ನಾಗೇಶ್‌ ಅವರಿಗೂ ಸಂಪುಟದಲ್ಲಿ ಸ್ಥಾನ ನೀಡಬೇಕಾಗಿದೆ. ಇದನ್ನು ಜೆಡಿಎಸ್‌ ಕೋಟಾದಲ್ಲಿ ನೀಡಬೇಕೇ ಅಥವಾ ಕಾಂಗ್ರೆಸ್ ಕೋಟಾದಲ್ಲಿ ನೀಡಬೇಕೇ ಎಂಬುದನ್ನು ತೀರ್ಮಾನಿಸಬೇಕು. ಇಲ್ಲವಾದರೆ, ಇಬ್ಬರೂ ಬಿಜೆಪಿ ಪಾಳಯಕ್ಕೆ ಜಿಗಿಯುವ ಸಾಧ್ಯತೆ ಇದೆ ಎಂದೂ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT