ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಬಾಲಭವನ ಬೇಸಿಗೆ ಶಿಬಿರ ಆರಂಭ

Last Updated 4 ಮೇ 2022, 12:48 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜವಾಹರ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆ ಸಹಯೋಗದಲ್ಲಿ ಇಲ್ಲಿನ ಬಾಲಭವನದಲ್ಲಿ ಹಮ್ಮಿಕೊಂಡಿರುವ ಬೇಸಿಗೆ ಶಿಬಿರಕ್ಕೆ ಶಾಸಕ ಅನಿಲ ಬೆನಕೆ ಮಂಗಳವಾರ ಚಾಲನೆ ನೀಡಿದರು.

ನಂತರ ಮಾತನಾಡಿ, ‘ಶಾಲಾ ರಜೆಯ ಸಮಯದಲ್ಲಿ ಉಚಿತವಾಗಿ ಶಿಬಿರ ಹಮ್ಮಿಕೊಂಡಿರುವುದು ಶ್ಲಾಘನೀಯವಾಗಿದೆ. ಇದರಿಂದ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಸಾಧ್ಯವಾಗಲಿದೆ’ ಎಂದರು.

‘ಎರಡು ವರ್ಷಗಳು ಕೊರೊನಾ ಕಾರಣದಿಂದಾಗಿ ಮಕ್ಕಳು ಮನೆಯಲ್ಲೇ ಇರಬೇಕಾಯಿತು. ಪರಿಣಾಮ ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಕಲಿಕೆಯ ಚೇತರಿಕೆಯ ಹಾದಿಗೆ ತರುವ ನಿಟ್ಟಿನಲ್ಲಿ ಇಂತಹ ಶಿಬಿರಗಳು ಸಹಕಾರಿಯಾಗಲಿವೆ’ ಎಂದು ಹೇಳಿದರು.

‘ಬಾಲಭವನದ ಅಭಿವೃದ್ಧಿಗೆ ಸಚಿವರೊಂದಿಗೆ ಚರ್ಚಿಸಲಾಗುವುದು’ ಎಂದರು.

ಜವಾಹರ ಬಾಲಭವನ ಸೊಸೈಟಿ ಸದಸ್ಯೆ ಲೀನಾ ಟೋಪಣ್ಣವರ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎ.ಎಂ. ಬಸವರಾಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT