ಮಧುಮೇಹ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ 14ರಂದು

ಬೆಳಗಾವಿ: ಇಲ್ಲಿನ ಕೆಎಲ್‌ಇ ಸಂಸ್ಥೆಯ ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಮಧುಮೇಹ ಕೇಂದ್ರವು ವಿಶ್ವ ತಾಯಿಂದಿರ ದಿನಾಚರಣೆ ಅಂಗವಾಗಿ ಮೇ 14ರಂದು ಬೆಳಿಗ್ಗೆ 8.30ರಿಂದ ಸಂಜೆ 4.30ರವರೆಗೆ ಮಧುಮೇಹಪೀಡಿತ ಮಕ್ಕಳಿಗೆ 22ನೇ ವಾರ್ಷಿಕ ಉಚಿತ ಬೇಸಿಗೆ ಶಿಬಿರ ಆಯೋಜಿಸಿದೆ.
ಸಂಸದೆ ಮಂಗಲಾ ಸುರೇಶ ಅಂಗಡಿ ಉದ್ಘಾಟಿಸಲಿದ್ದಾರೆ. ಡಾ.ವಿ.ಡಿ. ಪಾಟೀಲ, ಡಾ.ಎನ್.ಎಸ್. ಮಹಾಂತಶೆಟ್ಟಿ, ಕೆಎಲ್‌ಇ ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿ ಕುಲಪತಿ ಡಾ.ವಿವೇಕ ಸಾವೊಜಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ತಪಾಸಣೆ, ಆಟ, ಚಿತ್ರಕಲೆ, ಪೇಂಟಿಂಟ್ ಸ್ಫರ್ಧೆ ಮೊದಲಾದ ಚಟುವಟಿಕೆಗಳು ನಡೆಯಲಿವೆ. ಅತ್ಯುತ್ತಮ ಬಾಲಕಿ ಮತ್ತು ಬಾಲಕನಿಗೆ ಹಾಗೂ ತಾಯಿಗೆ ಪದಕ ನೀಡಿ ಗೌರವಿಸಲಾಗುವುದು. ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಎಂ.ವಿ. ಜಾಲಿ ನೇತೃತ್ವದಲ್ಲಿ ಡಾ.ಸುಜಾತಾ ಜಾಲಿ, ಡಾ.ಜ್ಯೋತಿ ವಸೆದಾರ ನಡೆಸಿಕೊಡಲಿದ್ದಾರೆ. ಡಾ.ದೀಪಶ್ರೀ ಅಂಟಿನ ಮಕ್ಕಳ ಕಣ್ಣು ತಪಾಸಣೆ ನಡೆಸಲಿದ್ದಾರೆ. ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ: 9844073591 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.