ಗುರುವಾರ , ಮೇ 26, 2022
23 °C

ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸುನೀಲ್ ಸಂಕ ಆಯ್ಕೆ, ಕಿರಣಗೆ ಕೈತಪ್ಪಿದ ಟಿಕೆಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳನ್ನು ಒಳಗೊಂಡ ವಾಯವ್ಯ ಪದವೀಧರರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಜಿಲ್ಲೆಯ ಅಥಣಿಯ ಸುನೀಲ ಸಂಕ ಅವರಿಗೆ ಟಿಕೆಟ್ ನೀಡಲಾಗಿದೆ.

ಅವರು ವಕೀಲರೂ ಹೌದು. ಪಕ್ಷದಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಆಪ್ತರಾಗಿ ಗುರುತಿಸಿಕೊಂಡಿದ್ದಾರೆ.

ಕೆಎಲ್‌ಇ ನಿರ್ದೇಶಕ ಡಾ.ವಿ.ಎಸ್. ಸಾಧುನವರ ಅವರ ಪುತ್ರ ಕಿರಣ ಸಾಧುನವರ ಅವರು ಟಿಕೆಟ್‌ಗಾಗಿ ಪ್ರಯತ್ನಿಸಿದ್ದರು. ಕೆಲವು ತಿಂಗಳಿಂದ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರವನ್ನೂ ನಡೆಸಿದ್ದರು. ಪದವೀಧರರು ಹೆಸರು ನೋಂದಣಿ ಮಾಡಿಕೊಳ್ಳುವಂತೆ ಜಾಗೃತಿಯ ಪೋಸ್ಟರ್‌ಗಳನ್ನು ಕೂಡ ಹಾಕುತ್ತಿದ್ದರು. ಅವರಿಗೇ ಟಿಕೆಟ್ ಅಂತಿಮ ಎಂಬ ಮಾತುಗಳು ಕೂಡ ಪಕ್ಷದ ವಲಯದಲ್ಲಿ ಕೇಳಿಬಂದಿದ್ದವು. ಆದರೆ, ಅವರಿಗೆ ಟಿಕೆಟ್ ಕೈತಪ್ಪಿದೆ. ಸುನೀಲ್ ಸಂಕ ಅವರಿಗೆ ಹೈಕಮಾಂಡ್ ಮಣೆ ಹಾಕಿದೆ.

ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸದಸ್ಯ ಹಣಮಂತ ನಿರಾಣಿ ಅವರಿಗೆ ಮತ್ತೆ ಟಿಕೆಟ್‌ ಘೋಷಿಸಲಾಗಿದೆ. ಅವರು ಬೃಹತ್‌ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಅವರ ಸಹೋದರ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು