ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಯಿಲೆಗಳು ಹರಡದಂತೆ ಕ್ರಮ ಕೈಗೊಳ್ಳಿ

ಶಾಸಕ ಅನಿಲ ಬೆನಕೆ ಸೂಚನೆ
Last Updated 1 ಆಗಸ್ಟ್ 2019, 14:32 IST
ಅಕ್ಷರ ಗಾತ್ರ

ಬೆಳಗಾವಿ: ‘ನಗರದಲ್ಲಿ ಸಾಂಕ್ರಾಮಿಕ ಕಾಯಿಲೆಗಳು ಹರಡದಂತೆ, ಉಲ್ಬಣಗೊಳ್ಳದಂತೆ ನೋಡಿಕೊಳ್ಳಬೇಕು’ ಎಂದು ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಸೂಚಿಸಿದರು.

ಗುರುವಾರ ನಗರಪಾಲಿಕೆ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಮಳೆಯಿಂದಾಗಿ ಉಂಟಾಗುವ ಕಾಯಿಲೆಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಪರಿಣಾಮಕಾರಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ಮಳೆ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಚರಂಡಿ, ನಾಲಾಗಳನ್ನು ಸ್ವಚ್ಛಗೊಳಿಸಬೇಕು. ಸಾರ್ವಜನಿಕರ ಸಮಸ್ಯೆಗಳ ನಿವಾರಣೆಗೆ ತುರ್ತಾಗಿ ಸ್ಪಂದಿಸಬೇಕು’ ಎಂದು ಹೇಳಿದರು.

‘ತಾಲ್ಲೂಕಿ ರಕ್ಕಸಕೊಪ್ಪ ಜಲಾಶಯ ಭರ್ತಿಯಾಗಿದೆ. ಆದರೆ, ಕೆಲವು ಪ್ರದೇಶಗಳಲ್ಲಿ ಕಲುಷಿತ ನೀರು ಪೂರೈಕೆಯಾಗುತ್ತಿರುವ ದೂರುಗಳು ಬಂದಿವೆ. ಇದನ್ನು ಸರಿಪಡಿಸಬೇಕು’ ಎಂದು ಜಲಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು. ‘ಕುಡಿಯುವ ನೀರಿನ ಅಭಾವವಿರುವ ಪ್ರದೇಶಗಳಲ್ಲಿ ಬೋರ್‌ವೆಲ್‌ಗಳನ್ನು ಕೊರೆಯಬೇಕು’ ಎಂದು ನಿರ್ದೇಶನ ನೀಡಿದರು.

‘ನಗರದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಅತಿವೃಷ್ಟಿಯಿಂದಾಗುವ ಸಮಸ್ಯೆಗಳನ್ನು ನಿವಾರಿಸಲು ಪಾಲಿಕೆ ಅಧಿಕಾರಿಗಳು–ಸಿಬ್ಬಂದಿಗಳ ತಂಡಗಳನ್ನು ರಚಿಸಲಾಗಿದೆ’ ಎಂದರು.

ಪಾಲಿಕೆ ಆರೋಗ್ಯ ಅಧಿಕಾರಿ ಡಾ.ಶಶಿಧರ ನಾಡಗೌಡ, ಪರಿಸರ ಎಂಜಿನಿಯರ್ ಉದಯಕುಮಾರ, ಕೆಯುಡಬ್ಲ್ಯುಎಸ್‌ಎಸ್‌ಬಿ ಕಾರ್ಯನಿರ್ವಾಹಕ ಎಂಜಿನಿಯರ್‌ ಎಂ.ಎಲ್. ಚಂದ್ರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT